ಅಭಿವೃದ್ಧಿ ಶುಲ್ಕು ಸಂಗ್ರಹ ಆರಂಭಿಸಿದ ಬಿಬಿಎಂಪಿ
ಬೆಂಗಳೂರು, ಜು. 8 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳಿಂದ ಭೂ ಬಳಕೆ ಪರಿವರ್ತನೆಯಾದ ಬಿಡಿ ನಿವೇಶನಗಳಿಂದ ಅಭಿವೃದ್ಧಿ ಶುಲ್ಕ ಸಂಗ್ರಹಿಸಲು ಸುತ್ತೋಲೆ ಹೊರಡಿಸಲಾಗಿದೆ. ಆಯುಕ್ತರು ಹೊರಡಿಸಿದ ಸುತ್ತೋಲೆಯಂತೆ ಅಭಿವೃದ್ಧಿ ಶುಲ್ಕ ಸಂಗ್ರಹಿಸಿ, ನಿವೇಶನಗಳಿಗೆ ಅಧಿಕೃತ ಖಾತೆ ನೀಡುವ ಪ್ರಕ್ರಿಯೆಯನ್ನು ಕಂದಾಯ ಅಧಿಕಾರಿಗಳು ಆರಂಭಿಸಿದ್ದಾರೆ.
ಸೋಮವಾರ ಈ ಕುರಿತು ಸುತ್ತೋಲೆ ಹೊರಡಿಸಿರುವ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮಿನಾರಾಯಣ ಅವರು, ಬಿಬಿಎಂಪಿ ವ್ಯಾಪ್ತಿಗೆ ಸೇರಿದ ಪ್ರದೇಶಗಳಲ್ಲಿ ವ್ಯವಸಾಯೇತರ ಉಪಯೋಗಕ್ಕಾಗಿ ಭೂ ಪರಿವರ್ತನೆಯಾದ ಜಾಗದಲ್ಲಿರುವ ನಿವೇಶನಗಳಿಂದ ಅಭಿವೃದ್ಧಿ ಶುಲ್ಕ ಸಂಗ್ರಹಿಸಲು ಒಪ್ಪಿಗೆ ನೀಡಿದ್ದಾರೆ.

ಬಿಬಿಎಂಪಿಯ ಹಳೆಯ ವಾರ್ಡ್ ಗಳಲ್ಲಿ ಪ್ರತಿ ಚದರ ಮೀಟರ್ ಗೆ ರೂ. 200 ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 98 ವಾರ್ಡ್ ಗಳಲ್ಲಿ ಪ್ರತಿ ಚದರ ಮೀಟರ್ ಗೆ 250 ರೂ. ಅಭಿವೃದ್ಧಿ ಶುಲ್ಕ ನಿಗದಿಗೊಳಿಸಲಾಗಿದೆ. ಹೊಸ ವಾರ್ಡ್ ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬೇಕಾಗಿರುವ ಕಾರಣ, ಹೆಚ್ಚಿನ ಶುಲ್ಕ ನಿಗದಿ ಮಾಡಲಾಗಿದೆ. [ಕೆ.ಆರ್.ಮಾರುಕಟ್ಟೆ ಬೆಳಗಿದ ಹಸಿ ತ್ಯಾಜ್ಯ]
ಶುಲ್ಕ ಹೆಚ್ಚಾಗಿತ್ತು : 2010ರಲ್ಲಿ ಪ್ರತಿ ಚದರ ಮೀಟರ್ ಗೆ ರೂ. 560ರಂತೆ ಅಭಿವೃದ್ಧಿ ಶುಲ್ಕ ನಿಗದಿ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ದರಿಂದ, ಹೊಸ ದರ ನಿಗದಿಪಡಿಸುವಂತೆ ಕೋರ್ಟ್ ಸೂಚನೆ ನೀಡಿತ್ತು. ಆ ಬಳಿಕ ರಚನೆಯಾದ ಸಮಿತಿ ಶಿಫಾರಸಿನ ಆಧಾರದಲ್ಲಿ ಹೊಸ ದರ ನಿಗದಿ ಪಡಿಸಲಾಯಿತು.
ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಭಿವೃದ್ಧಿ ಶುಲ್ಕ ಸಂಗ್ರಹಣೆ ಮಾಡಲು ಬಿಬಿಎಂಪಿಯ ಕೌನ್ಸಿಲ್ ಸಭೆಯಲ್ಲಿ ಕೆಲವು ದಿನಗಳ ಹಿಂದೆ ತೀರ್ಮಾನ ಕೈಗೊಳ್ಳಲಾಗಿತ್ತು. ಸದ್ಯ, ಆಯುಕ್ತರು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications