Get Updates
Get notified of breaking news, exclusive insights, and must-see stories!

ರೈಲು ನಿಲ್ದಾಣಗಳನ್ನು ಪರಿಶೀಲಿಸಿದ ಸದಾನಂದ ಗೌಡರು

ಬೆಂಗಳೂರು, ಜು.13 : ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಅವರು ಭಾನುವಾರ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪ್ರಯಾಣಿಕರ ಕುಂದು-ಕೊರತೆ ವಿಚಾರಿಸಿದರು. ಸ್ವಚ್ಛತೆಗೆ ಆದ್ಯತೆ ನೀಡಬೇಕು, ಭದ್ರತೆ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಭಾನುವಾರ ಬೆಳಗ್ಗೆ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸದಾನಂದ ಗೌಡರು, ರೈಲ್ವೆ ನಿಲ್ದಾಣದ ಸಮಸ್ಯೆಗಳು ಮತ್ತು ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಆನಂತರ ನಗರ ಕೇಂದ್ರ ರೈಲು ನಿಲ್ದಾಣಕ್ಕೆ ಆಗಮಿಸಿ ಪ್ಲಾಟ್‌ ಫಾರಂಗಳು, ಶೌಚಾಲಯ ಮತ್ತು ನಿಲ್ದಾಣಗಳ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. [ಗೌಡ್ರು ಬಿಡಲಿರುವ ಬುಲೆಟ್ ರೈಲಿನ ವಿಶೇಷತೆಗಳು!]

ನಂತರ ರೈಲಿನಲ್ಲಿ ಅವರು ಮೈಸೂರಿಗೆ ತೆರಳಿದರು. ಮಾರ್ಗ ಮಧ್ಯದಲ್ಲಿ ಚನ್ನಪಟ್ಟಣ, ಮಂಡ್ಯ ರೈಲು ನಿಲ್ದಾಣಗಳಿಗೂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಸದಾನಂದ ಗೌಡರನ್ನು ಬರಮಾಡಿಕೊಂಡರು. ಮೈಸೂರಿನಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಚಿತ್ರಗಳಲ್ಲಿ ನೋಡಿ ಸದಾನಂದ ಗೌಡರ ಭೇಟಿ

ಬೆಂಗಳೂರು ನಿಲ್ದಾಣಕ್ಕೆ ಭೇಟಿ

ಬೆಂಗಳೂರು ನಿಲ್ದಾಣಕ್ಕೆ ಭೇಟಿ

ಬೆಂಗಳೂರು ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಸದಾನಂದ ಗೌಡರು, ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ನಿಲ್ದಾಣದ ಕ್ಯಾಂಟೀನ್ ಗೆ ಭೇಟಿ ನೀಡಿ ಊಟ-ತಿಂಡಿ ವ್ಯವಸ್ಥೆ ಹೇಗಿದೆ ಎಂದು ಜನರನ್ನು ಪ್ರಶ್ನಿಸಿ ಮಾಹಿತಿ ಪಡೆದರು.

ಪ್ರಯಾಣಿಕರಿಗೆ ತೊಂದರೆ ಮಾಡಬೇಡಿ

ಪ್ರಯಾಣಿಕರಿಗೆ ತೊಂದರೆ ಮಾಡಬೇಡಿ

ಪ್ರಯಾಣಿಕರಿಗೆ ಹೆಚ್ಚು ಹೆಚ್ಚು ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸದಾನಂದ ಗೌಡರು, ಪ್ರಯಾಣಿಕರು ಗಂಟೆಗಟ್ಟಲೆ ಕ್ಯೂ ನಿಲ್ಲುವಂತೆ ಮಾಡಬಾರದು. ಅಗತ್ಯಬಿದ್ದರೆ ಹೆಚ್ಚುವರಿ ಟಿಕೆಟ್ ವಿತರಣಾ ಕೌಂಟರ್‌ಗಳನ್ನು ತೆರೆಯಬೇಕು. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಹೇಳಿದರು.

ಮೈಸೂರಿಗೆ ಭೇಟಿ

ಮೈಸೂರಿಗೆ ಭೇಟಿ

ನಂತರ ಮೈಸೂರಿಗೆ ರೈಲಿನಲ್ಲಿ ತೆರಳಿದ ಸದಾನಂದ ಗೌಡರು, ಮಂಡ್ಯ, ಚನ್ನಪಟ್ಟಣದಲ್ಲಿಯೂ ನಿಲ್ದಾಣಗಳಿಗೆ ಭೇಟಿ ನೀಡಿದರು. ಮೈಸೂರು-ಬೆಂಗಳೂರು ಜೋಡಿ ಮಾರ್ಗವನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ

ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ

ಮೈಸೂರಿನ ವಿಭಾಗೀಯ ಮಟ್ಟದ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸದಾನಂದ ಗೌಡರು, ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಹೈ ಸ್ಪೀಡ್ ರೈಲು ಆರಂಭಿಸಲು ಬಜೆಟ್ ನಲ್ಲಿ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಯಾವ ರೀತಿ ಕೆಲಸ-ಕಾರ್ಯಗಳು ಆಗಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಸಹ ಉಪಸ್ಥಿತರಿದ್ದರು.

ಬಿಜೆಪಿ ಕಚೇರಿಗೆ ಭೇಟಿ

ಬಿಜೆಪಿ ಕಚೇರಿಗೆ ಭೇಟಿ

ಮೈಸೂರಿನ ಬಿಜೆಪಿ ಕಚೇರಿಗೂ ಭೇಟಿ ನೀಡಿದ್ದ ಸದಾನಂದ ಗೌಡರು ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+