ಬೆಳಗಾವಿ : ಗುಂಪು ಘರ್ಷಣೆಗೆ ಒಬ್ಬರು ಬಲಿ
ಬೆಳಗಾವಿ, ಜು. 1 : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆ, ಕಲ್ಲು ತೂರಾಟ ಒಬ್ಬರ ಪ್ರಾಣವನ್ನು ತೆಗೆದಿದೆ. ಗೋಕಾಕ್ ತಾಲೂಕಿನ ಮಾನಮ್ಮಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಎಂಟು ಜನರು ಗುಂಪು ಘರ್ಷಣೆಯಿಂದಾಗಿ ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕಲ್ಲು ತೂರಾಟದಲ್ಲಿ ಮೃತಪಟ್ಟ ವ್ಯಕ್ತಿಯನ್ನು ದುಂಡಪ್ಪ (40) ಎಂದು ಗುರುತಿಸಲಾಗಿದೆ. ಗಾಯಗೊಂಡ ಎಂಟು ಜನರನ್ನು ಮುಧೋಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕುಲಗೋಡು ಪೊಲೀಸರು ಮಾನಮ್ಮಿ ಗ್ರಾಮಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ದುಂಡಪ್ಪ ಮತ್ತು ಪಕ್ಕದ ಮನೆಯವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸೋಮವಾರ ರಾತ್ರಿ ಮನೆ ಮುಂದಿನ ಟ್ರಾನ್ಸ್ಫಾರ್ಮರ್ ವಿಚಾರವಾಗಿ ಎರಡೂ ಕುಟುಂಬಗಳ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಕಲ್ಲು ತೂರಾಟ ನಡೆದಿದ್ದು, ಇದರಿಂದಾಗಿ ದುಂಡಪ್ಪ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದು ಗ್ರಾಮಕ್ಕೆ ಆಗಮಿಸಿದ ಕುಲಗೋಡು ಠಾಣೆ ಪೊಲೀಸರು ದುಂಡಪ್ಪ ಮೃತದೇಹವನ್ನು ಮುಧೋಳ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications