ಪ್ರೀತಿಸಿ, ಅತ್ಯಾಚಾರವೆಸಗಿ ಓಡಿಹೋದ ಎಸ್ಐ!

ದೂರು ಆಧರಿಸಿ ನ್ಯಾಯಾಲಯ ಧನಂಜಯ್ ಅವರ ಬಂಧನಕ್ಕೆ ವಾರೆಂಟ್ ಜಾರಿ ಮಾಡಿರುವ ಹಿನ್ನಲೆಯಲ್ಲಿ ದೆಹಲಿ ಮಲ್ವಿಯಾ ನಗರ ಪೊಲೀಸ್ ಠಾಣೆ ಸಿಬ್ಬಂದಿ ಬಂಧನ ವಾರೆಂಟ್ನೊಂದಿಗೆ ನಗರಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದ ಎಸ್ಸೈ ಧನಂಜಯ ಅವರು ಎಂಟು ದಿನಗಳಿಂದ ಭೂಗತರಾಗಿದ್ದಾರೆ.
ಎಂ.ಜಿ.ರಸ್ತೆಯ ಪಬ್ವೊಂದರಲ್ಲಿ ದೆಹಲಿ ಮೂಲದ 28 ವರ್ಷದ ಯುವತಿ ಬಾರ್ಟೆಂಡರ್ ಆಗಿ ಕೆಲಸ ಮಾಡುತ್ತಿದ್ದಳು. 2012ರ ಡಿಸೆಂಬರ್ನಲ್ಲಿ ಅದೇ ಪಬ್ಗೆ ಹೋಗಿದ್ದ ಧನಂಜಯ್ ಅವರಿಗೆ ಆ ಯುವತಿ ಪರಿಚಯವಾಗಿತ್ತು. ನಂತರ ಫೇಸ್ಬುಕ್ನಲ್ಲಿ ಪರಸ್ಪರ ಚಾಟಿಂಗ್ ನಡೆಸಿ, ಆತ್ಮೀಯರಾಗಿದ್ದರು. ಕ್ರಮೇಣ ಅದು ಪ್ರೇಮಕ್ಕೆ ತಿರುಗಿದೆ.
ಯುವತಿಗೆ ಬಾಡಿಗೆ ಮನೆಯನ್ನು ಕೊಡಿಸಿ ಅವಳೊಂದಿಗೆ ಒಂದು ವರ್ಷಗಳ ಕಾಲ ಲಿವ್ ಇನ್ ಸಂಬಂಧವನ್ನು ಧನಂಜಯ್ ಹೊಂದಿದ್ದರು. ನಂತರದ ದಿನಗಳಲ್ಲಿ ಇಬ್ಬರೂ ದೈಹಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗಿದೆ.
ಕೆಲ ತಿಂಗಳುಗಳಿಂದ ಯುವತಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಆಗ ಧನಂಜಯ ತನಗೆ ಮದುವೆಯಾಗಿ ಮಕ್ಕಳಿದ್ದಾರೆ. ಹೀಗಾಗಿ ಮದುವೆ ಸಾಧ್ಯವಿಲ್ಲ ಎಂದು ನಿರಾಕರಿಸಿದ್ದಾರೆ. ಆದರೆ, ಮದುವೆಯಾಗದಿದ್ದರೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಸಿದ್ದಳು.[ಅತ್ಯಾಚಾರ, ಪಿಜಿ ನಿಯಂತ್ರಣಕ್ಕೆ ತಜ್ಞ ಸಮಿತಿ ರಚನೆ]
ಈ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಧನಂಜಯ್ ಅವರು ಯುವತಿಯನ್ನು ಮನವೊಲಿಸುವ ಸಲುವಾಗಿ 2014ರ ಮಾ.24ರಂದು ಆಕೆಯನ್ನು ನಂದಿಬೆಟ್ಟಕ್ಕೆ ಕರೆದೊಯ್ದಿದ್ದರು. ಆದರೆ, ಅದು ಸಫಲವಾಗದೆ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದಾಗ ಅವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಅಪಘಾತವಾಗಿ ಧನಂಜಯ ತಲೆಗೆ ಪೆಟ್ಟಾಗಿತ್ತು.
ಈ ಸಮಯ ಬಳಸಿಕೊಂಡ ರಮಾ, ಧನಂಜಯರ ಸರ್ವಿಸ್ ರಿವಾಲ್ವರ್, ವಾಕಿಟಾಕಿ, ಎಟಿಎಂ ಕಾರ್ಡ್ ತೆಗೆದುಕೊಂಡು ಹೊಸದಿಲ್ಲಿಗೆ ಹೋಗಿದ್ದಳು ಎನ್ನಲಾಗಿದೆ.
ರಿವಾಲ್ವರ್ ಹಾಗೂ ವಾಕಿಟಾಕಿ ನಾಪತ್ತೆಯಾಗಿರುವ ವಿಚಾರ ಹಿರಿಯ ಅಧಿಕಾರಿಗಳಿಗೆ ತಿಳಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಆತಂಕಗೊಂಡ ಧನಂಜಯ, ದಿಲ್ಲಿಗೆ ತೆರಳಿ ಯುವತಿಯ ಓಲೈಸಿದ್ದಾರೆ. ಅಲ್ಲೂ ಆಕೆ ಎಸ್ಐ ಅವರನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ.
ಯುವತಿಯ ಒತ್ತಾಯಕ್ಕೆ ಮಣಿದು ಆಕೆಯನ್ನು ಅಲ್ಲಿಯೇ ವಿವಾಹವಾಗಿದ್ದರು. ನಂತರ ಆಕೆ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದು ದೆಹಲಿಯಲ್ಲೇ ನೆಲೆಸುವಂತೆ ಧನಂಜಯ್ ಅವರಲ್ಲಿ ಒತ್ತಡ ಹೇರಿದ್ದಳು. ಆದರೆ ಧನಂಜಯ್ ಅವರು ಬೆಂಗಳೂರಿಗೆ ವಾಪಸ್ ಬಂದಿದ್ದಾರೆ. ಇದರಿಂದ ಕೋಪಗೊಂಡ ಯುವತಿ ಅತ್ಯಾಚಾರ ಮತ್ತು ವಂಚನೆ ಆರೋಪದಡಿ ದೆಹಲಿಯ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ಧನಂಜಯ್ ಅವರು ನಕಲಿ ಕ್ರೆಡಿಟ್ ಕಾರ್ಡ್ ತಯಾರಿಸುತ್ತಿದ್ದ ಅಂತರರಾಷ್ಟ್ರೀಯ ಮಟ್ಟದ ವಂಚಕರ ಜಾಲವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications