ಜುಲೈ 8ರಂದು ಹಮಾಲಿ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು, ಜು.2: ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಮಾಲಿಗಳ ಬಗ್ಗೆ ಸರಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಒಕ್ಕೂಟ ಜು.8ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದೆ.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಚಾಲಕ ವಾಸು ಎಚ್.ವಿ ಮಾತನಾಡಿ ಹಮಾಲಿಗಳಿಗೆ ಕನಿಷ್ಠ ಮೂಲಸೌಕರ್ಯ ಒದಗಿಸಿಲ್ಲ. ಕೃಷಿ ಮಾರುಕಟ್ಟೆಗಳಲ್ಲಿ ಹಮಾಲಿಗಳಿಗೆ ಗುರುತಿನ ಚೀಟಿ ನೀಡಲು ಆಧಿಕಾರಿಗಳು ಹಿಂದೇಟು ಹಾಕುತ್ತಿರುವ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಎಲ್ಲಾ ಸಂಸ್ಥೆಗಳು ತನ್ನ ಕೆಲಸಗಾರರಿಗೆ ದುಡಿಯುವ ಸಮಯವನ್ನು ನಿಗದಿ ಮಾಡಿದೆ. ಆದರೆ ಹಮಾಲಿಯವರಿಗೆ ಇದುವರೆಗೂ ಇದುವರೆಗೂ ದುಡಿಯುವ ಸಮಯವನ್ನು ನಿಗದಿ ಮಾಡಿಲ್ಲ. ಅಷ್ಟೇ ಅಲ್ಲದೇ ಇಎಸ್ಐ ಮತ್ತು ಭವಿಷ್ಯ ನಿಧಿಯಂತಹ ಸಾಮಾಜಿಕ ಭದ್ರತಾ ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ವಾಸು ಎಚ್.ವಿ ಹೇಳಿದ್ದಾರೆ.[ರೈತರ ಪ್ರತಿಭಟನೆ ವೇಳೆ ಹಿಂದಕ್ಕೆ ಚಲಿಸಿದ ಬಿಎಂಟಿಸಿ ಬಸ್]
ರಾಜ್ಯ ಸರ್ಕಾರ ಇವರ ವೇತನವನ್ನು ಹೆಚ್ಚಿಸಿದರೂ ರಾಜ್ಯ ಸರ್ಕಾರ ಹೊಸ ವ್ಯವಸ್ಥೆಯ ಹೆಸರು ಹೇಳಿ ಇವರನ್ನು ಕೆಲಸದಿಂದಲೇ ಕಿತ್ತು ಹಾಕುವ ಪ್ರಯತ್ನ ನಡೆಯುತ್ತಿದೆ. ಒಂದು ವೇಳೆ ಹೊಸ ವ್ಯವಸ್ಥೆಯ ಹೆಸರು ಹೇಳಿ ಕೆಲಸದಿಂದ ಕಿತ್ತು ಹಾಕಿದರೆ ಇದೇ ವೃತ್ತಿಯನ್ನು ನಂಬಿಕೊಂಡಿರುವ ಸಾವಿರಾರು ಕುಟುಂಬಗಳು ಬೀದಿಪಾಲಾಗಲಿವೆ ಆತಂಕ ವ್ಯಕ್ತಪಡಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications