ಬೆಂಗಳೂರು ದಕ್ಷಿಣದಲ್ಲಿ ಮಂಗಳವಾರ ನೀರಿಲ್ಲ
ಬೆಂಗಳೂರು, ಜು.8:ಬಸವನಗುಡಿ ಜಲಾಗಾರದಿಂದ ನೀರು ಪೂರೈಕೆ ಮಾಡುತ್ತಿದ್ದ 750 ಎಂ. ಎಂ. ವ್ಯಾಸದ ಕೊಳವೆ ಮಾರ್ಗ ಜ್ಞಾನೋದಯ ಶಾಲೆಯ ಬಳಿಯಲ್ಲಿ ಸೋಮವಾರ ಒಡೆದು ಹೋಗಿದ್ದು, ಬೆಂಗಳೂರು ದಕ್ಷಿಣ ಭಾಗದಲ್ಲಿ ಮಂಗಳವಾರವೂ ನೀರು ಪೊರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
1974ರಲ್ಲಿ ಸ್ಥಾಪಿಸಿದ್ದ ಹಳೇಯ ಕೊಳವೆ ಮಾರ್ಗ ನಾಲ್ಕು ದಿನಗಳ ಹಿಂದೆ ಒಡೆದು ಹೋಗಿದೆ. ಕೊಳವೆ ಮಾರ್ಗ ಚರಂಡಿ ಕಾಲುವೆ ಕೆಳಗೆ ಹಾದು ಹೋಗಿದ್ದರಿಂದ ಸುಲಭವಾಗಿ ಯಾರ ಕಣ್ಣಿಗೆ ಬಿದ್ದಿರಲಿಲ್ಲ.

ದುರಸ್ತಿ ಕಾರ್ಯವನ್ನು ಜಲ ಮಂಡಳಿ ಆರಂಭಿಸಿದೆ. ದುರಸ್ತಿ ಕಾರ್ಯಕ್ಕಾಗಿ ಮಾರ್ಗದ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ. ಕಸ್ತೂರ್ ಬಾ ನಗರ, ದೇವನಾಥ ಬಾರ್ ರಸ್ತೆ, ಚಾಮರಾಜಪೇಟೆ, ಕಲಾಸಿಪಾಳ್ಯ, ನಂಜಾಂಬ ಅಗ್ರಹಾರ, ಆಜಾದ್ ನಗರ, ರುದ್ರಪ್ಪ ಗಾರ್ಡನ್, ವಾಲ್ಮೀಕಿ ನಗರ, ರಾಘವೇಂದ್ರ ಬಡಾವಣೆ, ಮೈಸೂರು ರಸ್ತೆ, ಜೆ.ಜೆ. ನಗರ, ಪಾದರಾಯನಪುರ ಪಶ್ಚಿಮ, ಫಾರೂಕ್ ನಗರ, ವಿ.ಎಸ್. ಗಾರ್ಡನ್, ಛಲವಾದಿ ಪಾಳ್ಯ, ಬಿನ್ನಿಪೇಟೆ, ಮಾಗಡಿ ರಸ್ತೆ, ಗೋಪಾಲಪುರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications