BBK 12 Finale: ಬಿಗ್ ಬಾಸ್ ಕನ್ನಡ 12 ಗ್ರ್ಯಾಂಡ್ ಫಿನಾಲೆಗೂ ಮುನ್ನ ಕಿಚ್ಚ ಸುದೀಪ್ ಭಾವನಾತ್ಮಕ ಪೋಸ್ಟ್
Actor Kichcha Sudeep: ಬಿಗ್ ಬಾಸ್ ಕನ್ನಡ 12 ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಆರಂಭ ಆಗಿದೆ. ಇದಕ್ಕೂ ಮುನ್ನ ಕಿಚ್ಚ ಸುದೀಪ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಭಾವನಾತ್ಮಕ ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದಾರೆ. ಹಾಗಾದ್ರೆ, ಅದರಲ್ಲಿ ಏನು ಬರೆದುಕೊಂಡಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಎಲ್ಲಾ ಬಾರಿಗಿಂತ ಈ ಸೀಸನ್ ವೀಕ್ಷಕರಲ್ಲಿ ಭಾರೀ ಕುತೂಹಲ ಹುಟ್ಟುಹಾಕಿದೆ. ಇನ್ನೂ ಇಂದು (ಜನವರಿ 18) ಕೊನೆ ದಿನವಾಗಿದ್ದು, ಗ್ರ್ಯಾಂಡ್ ಫಿನಾಲೆ ವೀಕ್ಷಣೆಗೆ ಕಾತರದಿಂದ ಕಾದಿದ್ದಾರೆ. ಇದಕ್ಕೂ ಮುನ್ನ ಕಿಚ್ಚ ಸುದೀಪ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಹಾಗಾದ್ರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಗ್ರ್ಯಾಂಡ್ ಫಿನಾಲೆಯತ್ತ ಎಲ್ಲರ ಚಿತ್ತ: 112 ದಿನಗಳ ಕಾಲ ನಡೆದ ಬಿಗ್ ಬಾಸ್ ಕನ್ನಡ 12 ಶೋ ಭಾರೀ ಜನಪ್ರಿಯತೆ ಗಳಿಸಿದೆ. ಕಿಚ್ಚ ಸುದೀಪ್ ಅವರ ನಿರೂಪಣೆಯಲ್ಲಿ ವೀಕ್ಷಕರಿಗೆ ಸಖತ್ ಮನರಂಜನೆ ಸಿಕ್ಕಿದೆ. ಈ ಬಾರಿ ಬಿಗ್ ಬಾಸ್ ಮನೆಗೆ ಒಟ್ಟು 24 ಸ್ಪರ್ಧಿಗಳು ಬಂದು ಹೋಗಿದ್ದಾರೆ. ಇದೀಗ ಆರು ಮಂದಿ ಉಳಿದುಕೊಂಡಿದ್ದು, ಇದರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಮತ್ತೊಬ್ಬರು ರನ್ನರ್ ಅಪ್ ಆಗಲಿದ್ದಾರೆ. ಇಂದು (ಜನವರಿ 18) ಗ್ರ್ಯಾಂಡ್ ಫಿನಾಲೆ ನಡೆಯಲಿದೆ.
ಟಾಪ್ 6 ಫಿನಾಲಿಸ್ಟ್‌ಗಳ ಪಟ್ಟಿ
* ಗಿಲ್ಲಿ ನಟ
* ಕಾವ್ಯಾ ಶೈವ
* ಅಶ್ವಿನಿ ಗೌಡ
* ಧನುಷ್ ಗೌಡ
* ಮ್ಯೂಟೆಂಟ್ ರಘು
* ರಕ್ಷಿತಾ ಶೆಟ್ಟಿ
ಇವರ ಪೈಕಿ ಯಾರು ವಿನ್ ಆಗಲಿದ್ದಾರೆ ಎಂಬುದನ್ನು ಕಿಚ್ಚ ಸುದೀಪ್ ಅವರು ಇಂದು ರಾತ್ರಿ ಘೋಷಣೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಅವರು ಈ ಸೀಸನ್ ಬಗ್ಗೆ ತಮ್ಮ ಕೊನೆಯ ಮಾತುಗಳನ್ನಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 12 ಶೋಗೆ ಗುಡ್ ಬಾಯ್ ಹೇಳಿದ್ದಾತೆ.
ಕಿಚ್ಚ ಸುದೀಪ್ ಹೇಳಿದ್ದೇನು?: "ಹೀಗೆ.. ಇಂದಿನ ಸೂರ್ಯಾಸ್ತದ ವೇಳೆಗೆ ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯ ಆಗುತ್ತದೆ. ಇದು ಗಮನಾರ್ಹವಾದ ಸೀಸನ್ ಆಗಿದೆ. ದೃಶ್ಯ ವೈಭವದಿಂದ ಕೂಡಿದ ಈ ಅದ್ಭುತ ಪಯಣವು ಬಿಗ್ ಬಾಸ್ ಪ್ರತಿ ಸೀಸನ್ನಲ್ಲಿ ಹೇಗೆ ಬೆಳವಣಿಗೆ ಕಾಣುತ್ತಿದೆ ಎಂಬುದಕ್ಕೆ ಸಾಕ್ಷಿ ಆಗಿದೆ," ಎಂದು ಕಿಚ್ಚ ಸದೀಪ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
"ಶ್ರದ್ಧೆಯಿಂದ ಕಾರ್ಯಕ್ರಮ ವೀಕ್ಷಿಸಿ ಬೆಂಬಲ ನೀಡಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು. ಎಲ್ಲ ಸ್ಪರ್ಧಿಗಳಿಗೆ ಮತ್ತು ವಿಜೇತರಿಗೆ ನನ್ನ ಅಭಿನಂದನೆಗಳು. ಈ ಅಗಾಧವಾದ ಯಶಸ್ಸಿಗಾಗಿ ತಂತ್ರಜ್ಞರ ತಂಡಕ್ಕೆ ನನ್ನ ಕಡೆಯಿಂದ ದೊಡ್ಡ ಅಭಿನಂಧನೆ. ನೀವೆಲ್ಲಾ ಇಲ್ಲ ಅಂದ್ರೆ ಬಿಗ್ ಬಾಸ್ ಕಾರ್ಯಕ್ರಮವೇ ಇಲ್ಲ," ಎಂದು ಹೇಳಿದ್ದಾರೆ.
"ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭ ಆಗುವವರೆಗೂ ಬಿಗ್ ಬಾಸ್ ವಿಶ್ರಾಂತಿ ಪಡೆಯಲಿ ಎಂದು ಈ ಸೂರ್ಯಾಸ್ತದ ವೇಳೆಗೆ ಬಿಗ್ ಬಾಸ್ ಮನೆಯ ಬಾಗಿಲುಗಳನ್ನು ಗೌರವದಿಂದ ಮುಚ್ಚಲಾಗುತ್ತದೆ" ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ಈ ಪೋಸ್ಟ್ ವೈರಲ್ ಆಗಿದೆ.
And thus... by sundown today,, #BBK12 shall come to a close. This remarkable season,, an extraordinary voyage of growth and spectacle,, has borne witness to BigBoss’s growth with every passing season. My profound gratitude to every devoted viewer for unwavering support❤️,,… pic.twitter.com/Y9AF5mKFMN
— Kichcha Sudeepa (@KicchaSudeep) January 18, 2026
ಇನ್ನೂ ಬಿಗ್ ಬಾಸ್ ನಿರೂಪಣೆ ಮಾಡುವುದು ಅಷ್ಟು ಸುಲಭದ ಮಾತಲ್ಲ. ಕೈಯಲ್ಲಿರುವ ಎಲ್ಲಾ ಬೆರಳುಗಳು ಸಮನಾಗಿರುವುದಿಲ್ಲ. ಅದೇ ರೀತಿ ಎಲ್ಲಾ ರೀತಿಯ ವ್ಯಕ್ತಿತ್ವ ಇರುವ ಸ್ಪರ್ಧಿಗಳನ್ನು ನಿಭಾಯಿಸಬೇಕು. ಎಷ್ಟೇ ಬ್ಯುಸಿಯಾಗಿದ್ದರೂ ಸಹ ಪ್ರತಿ ವಾರ ತಪ್ಪದೇ ವಾರಾಂತ್ಯದ ಸಂಚಿಕೆ ನಡೆಸಿಕೊಡಬೇಕು. ಜೊತೆಗೆ ಸಾಮಾಜಿಕ ಮಾಧ್ಯಮದಲ್ಲಿ ಬರುವ ಟೀಕೆಗಳನ್ನೂ ಎದುರಿಸಬೇಕಾಗುತ್ತದೆ. ಇಂತಹ ಟೀಕೆಗಳನ್ನು ಕಿಚ್ಚ ಸುದೀಪ್ ಅವರು ಎದುರಿಸುತ್ತಲೇ ಬಂದಿದ್ದಾರೆ. ಹಾಗೆಯೇ ಇದೀಗ ಸೀಸನ್ 12 ಮುಕ್ತಾಯದ ಹೊಸ್ತಿಲಲ್ಲಿ ಇದ್ದು, ಇಲ್ಲಿಯವರೆಗೂ ಬಂದಂತಹ ಟೀಕೆಗಳನ್ನೂ ಕೂಡ ಅವರು ಎದುರಿಸಿದ್ದಾರೆ. ಇನ್ನೂ ಇದೀಗ ಎಲ್ಲರ ಚಿತ್ತ ಫಿನಾಲೆಯತ್ತ ನೆಟ್ಟಿದ್ದು, ಯಾರು ವಿನ್ನರ್ ಆಗಲಿದ್ದಾರೆ ಎಂದು ಕಾದುನೋಡಬೇಕಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications