Dhurandhar OTT: ಒಟಿಟಿಗೆ ಬರಲಿದೆ ಬಹು ನಿರೀಕ್ಷಿತ ಧುರಂಧರ್ ಸಿನಿಮಾ: ಯಾವಾಗ, ಎಲ್ಲಿ ಎನ್ನುವ ವಿವರ ಇಲ್ಲಿದೆ
Dhurandhar OTT: ಬಾಲಿವುಡ್ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲೇ ಹೊಸ ದಾಖಲೆ ಬರೆದಿರುವ ಹಾಗೂ ಕೋವಿಡ್ ನಂತರ ಅತಿ ಹೆಚ್ಚು ಜನ ವೀಕ್ಷಿಸಿದ್ದಾರೆ ಎನ್ನುವ ಖ್ಯಾತಿ ಗಳಿಸಿರುವ ಧುರಂಧರ್ ಸಿನಿಮಾ ಒಟಿಟಿಗೆ ಬರುವುದಕ್ಕೆ ರೆಡಿಯಾಗಿದೆ. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಅತ್ಯುತ್ತಮ ಗಳಿಕೆ ಕಂಡಿದೆ. ಜನವರಿ 30ರಂದು ಒಟಿಟಿಯಲ್ಲಿ ಬಿಡುಗಡೆಯಾಗುವುದಕ್ಕೆ ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ. ಮುಖ್ಯಭೂಮಿಕೆಯಲ್ಲಿ ರಣವೀರ್ ಸಿಂಗ್ ಅಭಿನಯಿಸಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಬಾಕ್ಸ್ ಆಫೀಸ್‌ನಲ್ಲಿ 1300 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.
ರಣವೀರ್ ಸಿಂಗ್ ನಟಿಸಿರುವ ಆದಿತ್ಯ ಧರ್ ಅವರ ಧುರಂಧರ್ ಸಿನಿಮಾ ಯಾವಾಗ ಒಟಿಟಿಗೆ ಬರಲಿದೆ ಎಂದು ಸಿನಿಮಾ ಪ್ರಿಯರು ಕಾತುರದಿಂದ ಕಾಯುತ್ತಿದ್ದರು. ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿರುವ ಧುರಂಧರ್ ಜನವರಿ 30ರಂದು ನೆಟ್‌ಫ್ಲಿಕ್ಸ್‌ನಲ್ಲಿ ಡಿಜಿಟಲ್ ಪ್ರೀಮಿಯರ್‌ಗೆ ಸಿದ್ಧವಾಗಿದೆ. ಉತ್ತರ ಭಾರತ ಸೇರಿದಂತೆ ಸ್ಟ್ರೀಮಿಂಗ್ ಹಕ್ಕುಗಳಿಗಾಗಿ 130 ಕೋಟಿ ರೂಪಾಯಿ ಲಾಭದಾಯಕ ಒಪ್ಪಂದವನ್ನು ಇದು ಒಳಗೊಂಡಿದೆ.

ಈಚೆಗೆ ಬಿಡುಗಡೆಯಾದ ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆ ಮತ್ತು ಭರ್ಜರಿ ಯಶಸ್ಸು ಗಳಿಸಿದೆ. ಆದಿತ್ಯ ಧರ್ ನಿರ್ದೇಶನದ ಧುರಂಧರ್ ಸಿನಿಮಾವು ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳ ನಂತರವೂ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಲೇ ಇದೆ. ಪ್ರತಿ ವಾರವೂ ಹೊಸ ದಾಖಲೆ ಸೃಷ್ಟಿ ಮಾಡುತ್ತಿದೆ. ಈ ರೀತಿ ಇರುವಾಗಲೇ ಒಟಿಟಿಗೆ ಬರುವುದಕ್ಕೆ ಸಿದ್ಧವಾಗಿದೆ. ಧುರಂಧರ್ ಹೊಸದಾಗಿ ಬಿಡುಗಡೆಯಾದ ಚಿತ್ರಗಳಿಂದ ನಿರಂತರ ಸ್ಪರ್ಧೆಯ ನಡುವೆಯೂ ಉತ್ತಮ ಪ್ರದರ್ಶನ ಕಾಣುತ್ತಿದೆ.
ಇನ್ನು ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಂಪಾಲ್ ಹಾಗೂ ಆರ್ ಮಾಧವನ್ ಸೇರಿದಂತೆ ಪ್ರಮುಖ ನಟರು ಅಭಿನಯಿಸಿದ್ದಾರೆ. ಅಲ್ಲದೇ ಈ ಸಿನಿಮಾ ಇಲ್ಲಿಯವರೆಗೆ ವರ್ಷದ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಚಿತ್ರಗಳಲ್ಲಿ ಒಂದಾಗಿದೆ.
ಧುರಂಧರ್ ಸಿನಿಮಾ ಯಾವ ಒಟಿಟಿಗೆ ಬರಲಿದೆ ?
OTTplay ವರದಿಯ ಪ್ರಕಾರ, ಧುರಂಧರ್ ಶೀಘ್ರದಲ್ಲೇ ಆನ್‌ಲೈನ್‌ನಲ್ಲಿ ಪ್ರದರ್ಶನಗೊಳ್ಳಲಿದೆ. ರಣವೀರ್ ಸಿಂಗ್ ಮುಖ್ಯಭೂಮಿಕೆಯ ಥ್ರಿಲ್ಲರ್ ಚಿತ್ರವು ಜನವರಿ 30 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗುವ ನಿರೀಕ್ಷೆಯಿದೆ. ಇದು ಪ್ರೇಕ್ಷಕರಿಗೆ ಮನೆಯಿಂದಲೇ ಬೇಹುಗಾರಿಕೆ ಆಧಾರಿತ ಸಿನಿಮಾ ನೋಡುವುದಕ್ಕೆ ಅತ್ಯುತ್ತಮ ಅವಕಾಶ ಎಂದೇ ಹೇಳಬಹುದಾಗಿದೆ.
ಒಟಿಟಿ ವಿಳಂಬಕ್ಕೆ ಕಾರಣವೇನು
ಇನ್ನು ಧುರಂಧರ್ ಸಿನಿಮಾ ಈಗಾಗಲೇ ಒಟಿಟಿಗೆ ಬಿಡುಗಡೆಯಾಗಬೇಕಾಗಿತ್ತು. ಆದರೆ, ಚಿತ್ರಮಂದಿರಗಳಲ್ಲಿ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಒಟಿಟಿಗೆ ಬರುವುದಕ್ಕೆ ವಿಳಂಬವಾಗಿದೆ ಎಂದು ಹೇಳಲಾಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನದಿಂದಾಗಿ ಗರಿಷ್ಠ ಮೊತ್ತದ ಆದಾಯವನ್ನು ಗಳಿಸುವ ಉದ್ದೇಶದಿಂದ ಸಿನಿಮಾದ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಒಟಿಟಿ ಬಿಡುಗಡೆಯನ್ನು ವಿಳಂಬಗೊಳಿಸಿದ್ದಾರೆ ಎಂದು ವ್ಯಾಪಾರ ವಿಶ್ಲೇಷಕರು ಹೇಳಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications