ಬೆಂಗ್ಳೂರು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟಿನಲ್ಲಿ ವಿವಿಧ ಹುದ್ದೆಗಳಿವೆ

ಬೆಂಗಳೂರು ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರು ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಿಸಲಾಗಿದೆ, ಮೇ 08ರೊಳಗೆ ಅರ್ಜಿ ಹಾಕಿ.

Subscribe to Oneindia Kannada

ಬೆಂಗಳೂರು, ಏಪ್ರಿಲ್ 11 : ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ 77 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರು ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಿಸಲಾಗಿದ್ದು, ಸೂಕ್ತ ಅರ್ಜಿ ನಮೂನೆಯನ್ನು ಆಯ್ಕೆ ಮಾಡಿಕೊಂಡು ನಿಗದಿತ ದಿನಾಂಕ ಮೇ 08ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.[ಕರ್ನಾಟಕದಾದ್ಯಂತ ಅಂಚೆ ಕಚೇರಿಯಲ್ಲಿ 1048 ಹುದ್ದೆಗಳಿವೆ, ಅರ್ಜಿ ಹಾಕಿ]

Bangalore district Sessions court stenographer-typist job details

ಒಟ್ಟು ಹುದ್ದೆಗಳು 77:
1. Typist Copyist 09
2. Typist 36
3. Stenographer 32

* ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35, Cat-2A, Cat-2B, Cat-3A, Cat-3B ಅಭ್ಯರ್ಥಿಗಳಿಗೆ 18 ರಿಂದ 38 ಹಾಗೂ ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 18 ರಿಂದ 40 ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

* ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.[ಓರಿಯಂಟಲ್ ಬ್ಯಾಂಕಲ್ಲಿ ವಿವಿಧ ಹುದ್ದೆಗಳಿವೆ, ಏ.26ರೊಳಗೆ ಅರ್ಜಿ ಹಾಕಿ]

* ಆಯ್ಕೆ ವಿಧಾನ: ಕೌಶಲ್ಯ ಪರೀಕ್ಷೆ ಹಾಗೂ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

* ಅರ್ಜಿ ಶುಲ್ಕ: ಈ ಎಲ್ಲಾ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳಿಗೆ 200 ರು. ಮತ್ತು ಇತರೆ ಹಿಂದುಳಿದ, ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 100 ರು ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

* ಆನ್ ಲೈನ್ ಪೇಮೆಂಟ್: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಪಾವತಿಸಿಬಹುದು. ಇಲ್ಲವಾದಲ್ಲಿ ಎಸ್ ಬಿಐ ಬ್ಯಾಂಕಲ್ಲಿ ಚಲನ್ ತುಂಬಬೇಕು.

ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

English summary
District & Sessions Judge, Bangalore has published notification for the recruitment of 32 Stenographer, 36 Typist, 09 Typist Copyist vacancies. Eligible candidates may apply online on or before 08-05-2017 by 11:59 hrs.
Please Wait while comments are loading...