ಜಿಐಸಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿವೆ, ಅರ್ಜಿ ಹಾಕಿ

Subscribe to Oneindia Kannada

ಬೆಂಗಳೂರು, ಮಾರ್ಚ್. 14 : ಜನರಲ್ ಇನ್ಶುರನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ(ಜಿಐಸಿ) ಖಾಲಿ ಇರವ 33 ಅಸಿಸ್ಟೆಂಟ್ ಮ್ಯಾನೇಜರ್ ಸ್ಕೇಲ್-1 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆ ದಿನವಾಗಿದೆ.

ಹುದ್ದೆ: ಅಸಿಸ್ಟೆಂಟ್ ಮ್ಯಾನೇಜರ್ ಸ್ಕೇಲ್-1
ಸ್ಥಳ:ಭಾರತದಾದ್ಯಂತ
ವೇತನ: 32795 ರಿಂದ 62315 ರು. (ತಿಂಗಳಿಗೆ)
ವಿದ್ಯಾಭ್ಯಾಸ: ಈ ಹುದ್ದೆಗೆ ಅರ್ಜಿ ಅಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಇಂಜಿನಿಯರಿಂಗ್, ಮೆಡಿಕಲ್,ಫೈನಾನ್ಸ್, ಪೂರ್ಣಗೊಳಿಸಿರಬೇಕು.

GIC Recruitment 2017 Apply For 33 Assistant Manager Posts

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಗುಂಪು ಸಂವಹನ ಹಾಗೂ ವೈಯಕ್ತಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ 21ರಿಂದ 30ರ ವರೆಗೆ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.ಇನ್ನುಳಿದ ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಅಸಿಸ್ಟೆಂಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ 500 ರುಗಳನ್ನು ಪಾವತಿಸಬೇಕು.

ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

English summary
General Insurance Corporation of India released new notification on their official website for the recruitment of 33 (thirty three) vacancies for Assistant Manager (Scale-I). Job seekers should apply from 08th March 2017 and before 27th March 2017.
Please Wait while comments are loading...