ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

162 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

|
Google Oneindia Kannada News

ಬೆಂಗಳೂರು, ಮಾರ್ಚ್ 15 : ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 15, 2016.

ಸಹಾಯಕ ನಿಯಂತ್ರಕರು ಸಮೂಹ 'ಎ' ವೃಂದದ 54 ಹುದ್ದೆಗಳು ಮತ್ತು ಲೆಕ್ಕಪರಿಶೋಧನಾಧಿಕಾರಿ ಸಮೂಹ 'ಬಿ' ವೃಂದದ 108 ಹುದ್ದೆಗಳು ಸೇರಿದಂತೆ ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. [ಅರ್ಜಿ ಸಲ್ಲಿಸಲು ವಿಳಾಸ]

kpsc

ಮಾರ್ಚ್ 14ರಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 15 ಏಪ್ರಿಲ್ 2016. ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಏಪ್ರಿಲ್ 16. ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. [KPSC ಗ್ರೂಪ್ 'ಸಿ' ವೃಂದದ ನೇಮಕಾತಿ ವಿವರ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾಂ) ಅನ್ನು ಹೊಂದಿರ ತಕ್ಕದ್ದು ಅಥವ ಎಂ.ಬಿ.ಎ. ಹೊಂದಿರತಕ್ಕದ್ದು. ಚಾರ್ಟರ್ಡ್ ಅಕೌಂಟೆನ್ಸ್ ಅಥವ ಐಸಿಡಬ್ಲ್ಯೂಎ ನಲ್ಲಿ ಫೆಲೋ ಹೊಂದಿರತಕ್ಕದ್ದು. [ಕನ್ನಡದಲ್ಲಿ ಅಧಿಸೂಚನೆ ಓದಿ]

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 21 ವರ್ಷಗಳು. ಸಾಮಾನ್ಯ ವರ್ಗದವರಿಗೆ 35, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ/ಪ.ಪಂ/ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮಾಜಿ ಸೈನಿಕರು, ಅಂಗವಿಕಲರು ಮತ್ತು ವಿಧವೆಯರಿಗೆ 10 ವರ್ಷಗಳ ವಯೋಮಿತಿ ಇದೆ. [ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದ KSECS]

job news

ಅರ್ಜಿ ಶುಲ್ಕಗಳು : ಪ.ಜಾ/ಪ.ಪಂ/ಪ್ರವರ್ಗ -1/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ರೂ.,ಇತರೆ ಅಭ್ಯರ್ಥಿಗಳಿಗೆ 300 ರೂ. ಶುಲ್ಕ ನಿಗದಿಪಡಿಸಲಾಗಿದೆ. [ಸುದ್ದಿದನಿ : ಉದ್ಯೋಗ ಮಾಹಿತಿ]

English summary
The Karnataka Public Service Commission (KPSC) has invited online applications for the post of Assistant Controller and Audit Officer post. April 15, 2016 last date for submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X