ಯಾದಗಿರಿ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ

Subscribe to Oneindia Kannada

ಯಾದಗಿರಿ, ಆಗಸ್ಟ್ 02 : ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 24, 2016 ಕೊನೆಯ ದಿನ.

8 ಬೆರಳಚ್ಚುಗಾರರು, 3 ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟ್ರಿಯಲ್ ಮತ್ತು ಇತರ ಹುದ್ದೆಗಳು) (ನೇಮಕಾತಿ) ನಿಯಮಗಳು -1982 ಮತ್ತು ತಿದ್ದುಪಡಿ ನಿಯಮಗಳು 2007ರ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.[ಐಸಿಐಸಿಐ ಬ್ಯಾಂಕಿನಲ್ಲಿ Walk in interview]

job

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆಯಲ್ಲಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.[ನೇಮಕಾತಿ ಆದೇಶ, ಅರ್ಜಿ ನಮೂನೆಗಾಗಿ ಕ್ಲಿಕ್ ಮಾಡಿ]

ವಯೋಮಿತಿ : ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ವರ್ಷ, 2ಎ/2ಬಿ/3ಎ/3ಬಿ 38 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ -1 40 ವರ್ಷಗಳು. ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ಇದೆ.[ದಕ್ಷಿಣ ಕನ್ನಡದಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ]

ಅಭ್ಯರ್ಥಿಯು ಅರ್ಜಿಯ ಜೊತೆ 5 ರೂ.ಗಳ ಅಂಚೆ ಚೀಟಿ ಲಗತ್ತಿಸಿರುವ ಸ್ವ ವಿವರವುಳ್ಳ ಲಕೋಟೆಯನ್ನು ಲಗತ್ತಿಸತಕ್ಕದ್ದು. ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬುದನ್ನು ದಪ್ಪ ಅಕ್ಷರದಲ್ಲಿ ಲಕೋಟೆ ಮೇಲೆ ಬರೆಯಬೇಕು.

English summary
Yadgir district court invited applications for the post of Typist. August 24, 2016 last date for submit application.
Please Wait while comments are loading...