ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಬಂಡಾಯ ಶಾಸಕರಿಂದ ಅಮಾವಾಸ್ಯೆ ಪೂಜೆ!

|
Google Oneindia Kannada News

ಮಂಡ್ಯ, ಫೆಬ್ರವರಿ 14 : ಜೆಡಿಎಸ್‌ನಿಂದ ಅಮಾನತುಗೊಂಡಿರುವ ಶಾಸಕರಲ್ಲಿ ಮೂವರು ದೇವರ ಮೊರೆ ಹೋಗಿದ್ದಾರೆ. ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆಯಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಾಲಯದಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದೆ. ಬಂಡಾಯ ಶಾಸಕರು ಕುಟುಂಬ ಸದಸ್ಯರ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

 ಕಾಲಭೈರವೇಶ್ವರನಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿದ ರೇವಣ್ಣ ದಂಪತಿ ಕಾಲಭೈರವೇಶ್ವರನಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿದ ರೇವಣ್ಣ ದಂಪತಿ

ನಾಗಮಂಗಲ ಕ್ಷೇತ್ರದ ಶಾಸಕ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ದಂಪತಿ ಸಮೇತ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

Amavasya Pooja by JDS rebel MLA's in Adichunchanagiri

ಅವಾಮಾಸ್ಯೆಯಂದು ಕಾಲಭೈರವೇಶ್ವರ ಸೇರಿದಂತೆ ಕ್ಷೇತ್ರಾಧಿ ದೇವತೆಗಳ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಯಾಗಲಿದೆ ಎಂಬ ನಂಬಿಕೆ ಇದೆ. ಆದ್ದರಿಂದ, ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ ರೇವಣ್ಣ ಹಾಗೂ ಜಯಚಂದ್ರ ದಂಪತಿಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ ರೇವಣ್ಣ ಹಾಗೂ ಜಯಚಂದ್ರ ದಂಪತಿ

ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಈ ನಾಯಕರು ಕಾಂಗ್ರೆಸ್ ಸೇರುವ ಸಿದ್ಧತೆಯಲ್ಲಿದ್ದಾರೆ. ಆದರೆ, ಎಂದು ಪಕ್ಷ ಸೇರಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.

ಕಾಲಭೈರವೇಶ್ವರನಿಗೆ ಅಮಾವಾಸ್ಯೆಯಂದು ನಡೆಯುವ ಪೂಜೆ ವಿಶೇಷವಾಗಿದೆ. ಈ ಹಿಂದೆ ನಡೆದ ಪೂಜೆಯಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರು ಪಾಲ್ಗೊಂಡಿದ್ದರು.

English summary
Magadi MLA H.C.Balakrishna, Nagamangala MLA Cheluvarayaswamy, Srirangapatna MLA Ramesh Bandi Siddegowda preforming special amavasya Pooja in Adichunchanagiri Kalabhairaveshwara temple, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X