ಉಷಾ ಪಿ.ರೈ ಮಡಿಲಿಗೆ ಬಿ.ಸರೋಜಾದೇವಿ ಪ್ರಶಸ್ತಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನ ಪ್ರತಿಷ್ಠಿತ ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿ ಗೆ ಹಿರಿಯ ಲೇಖಕಿ ಉಷಾ ಪಿ. ರೈ ಅವರು ಆಯ್ಕೆಯಾಗಿದ್ದಾರೆ.
ಪದ್ಮಭೂಷಣ ಬಿ. ಸರೋಜಾದೇವಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿ ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಜನವರಿ ತಿಂಗಳಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಹಿತ್ಯ ಪರಿಷತ್‌ನ ಪ್ರಕಟಣೆ ತಿಳಿಸಿದೆ.
ಬಿ. ಸರೋಜಾ ದೇವಿ ತಮ್ಮ ಮಗಳು ದಿ. ಭುವನೇಶ್ವರಿ ಅವರ ಸ್ಮರಣೆಗಾಗಿ ಸಾಹಿತ್ಯ ಪರಿಷತ್‌ನಲ್ಲಿ ಒಂದು ಲಕ್ಷ ರೂಪಾಯಿ ದತ್ತಿ ನಿಧಿ ಸ್ಥಾಪಿಸಿದ್ದು, ಅದರ ಬಡ್ಡಿಯಲ್ಲಿ ಬರುವ ಹಣದಿಂದ ಸಾಧನೆ ಮಾಡಿರುವ ಲೇಖಕಿಯರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಉಷಾ ಪಿ. ರೈ ಅವರು ಮೂಲತಃ ಉಡುಪಿಯವರಾಗಿದ್ದು ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು. ಪ್ರಸ್ತುತ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾಗಿ ಲೇಖಕಿಯರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು











Click it and Unblock the Notifications