2007ರೊಳಗೆ ಕನ್ನಡ ಸಾಹಿತ್ಯ ಪರಿಷತ್ತಿಗೆ ನೂತನ ಕಟ್ಟಡ

2007ರೊಳಗೆ ಕನ್ನಡ ಸಾಹಿತ್ಯ ಪರಿಷತ್ತಿಗೆ ನೂತನ ಕಟ್ಟಡ
ಪರಿಷತ್ತಿನ ಐತಿಹಾಸಿಕ ಕಟ್ಟಡ ನೆಲಸಮ... ಐದು ಕೋಟಿ ವೆಚ್ಚದಲ್ಲಿ ಭವ್ಯ ಕಟ್ಟಡ -ಚಂಪಾ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರ ಕಟ್ಟಡವನ್ನು ನೆಲಸಮಗೊಳಿಸಿ, ಅದೇ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ಪರಿಷತ್ತು ನಿರ್ಧರಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪಾಟೀಲ(ಚಂಪಾ), 2007ರ ಅಂತ್ಯದೊಳಗೆ ಸುಮಾರು 5ಕೋಟಿ ರೂ.ಅಂದಾಜಿನ ಭವ್ಯ ಕಟ್ಟಡ ತಲೆ ಎತ್ತಲಿದೆ ಎಂದರು.

ಅಕ್ಟೋಬರ್‌ನಲ್ಲಿ ನೂತನ ಕಟ್ಟಡದ ಕಾಮಗಾರಿ ಆರಂಭಗೊಳ್ಳಲಿದೆ. ರಾಜ್ಯ ಲೋಕೋಪಯೋಗಿ ಇಲಾಖೆ ನಿರ್ಮಾಣದ ಹೊಣೆಹೊತ್ತಿದ್ದು, ಮೂರು ಅಂತಸ್ತುಗಳ ಭವ್ಯ ಕಟ್ಟಡವನ್ನು ನಿರ್ಮಾಣ ಮಾಡಲಿದೆ ಎಂದು ಚಂದ್ರಶೇಖರ ಪಾಟೀಲ ಹೇಳಿದರು.

ನಾಡು-ನುಡಿಗೆ ಸಂಬಂಧಿಸಿದಂತೆ ಡಾಕ್ಟರೇಟ್‌ ಪಡೆದ ಸಂಶೋಧನ ಪ್ರಬಂಧಗಳನ್ನು, ಪುಸ್ತಕರೂಪದಲ್ಲಿ ಪ್ರಕಟಿಸಲು ಪರಿಷತ್ತು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಸರ್ಕಾರದ ನೆರವು ಕೋರಲಾಗಿದೆ ಎಂದು ತಿಳಿಸಿದರು.

(ದಟ್ಸ್‌ ಕನ್ನಡ ವಾರ್ತೆ)


ಮುಖಪುಟ / ವಾರ್ತೆಗಳು

Please Wait while comments are loading...