ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಠ್ಯಪುಸ್ತಕ ವಿತರಣೆಯಲ್ಲಿ ದಾಖಲೆ : ಕಾಗೇರಿ

By Staff
|
Google Oneindia Kannada News

ಬೆಂಗಳೂರು, ಮೇ. 7 : ಮುಂದಿನ ಶೈಕ್ಷಣಿಕ ಸಾಲಿಗಾಗಿ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ಶಾಲೆಗಳಿಗೆ ಪೂರೈಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 54 ಸಾವಿರ ಶಾಲೆಗಳಿದ್ದು, ಈಗಾಗಲೇ ಶೇ. 99 ರಷ್ಟು ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಶಾಲೆಗೆ ವಿತರಿಸಿ ಹೊಸ ದಾಖಲೆ ನಿರ್ಮಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಪ್ರತಿವರ್ಷ ಸಮವಸ್ತ್ರ ವಿತರಣೆಯಲ್ಲಿ ಉಂಟಾಗುತ್ತಿದ್ದ ಗೊಂದಲ ನಿವಾರಣೆಯಾಗಿದೆ. ಒಂದರಿಂದ ಹತ್ತನೇ ತರಗತಿವರೆಗಿನ 317 ವಿವಿಧ ವಿಷಯ ಹಾಗೂ ಶೀರ್ಷಿಕೆಗಳ 3.70 ಕೋಟಿ ಪುಸ್ತಕಗಳು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಬೇಕಾಗಿದೆ. ಈ ಪೈಕಿ ಎಪ್ರಿಲ್ ಹತ್ತನೇ ತಾರೀಕಿನೊಳಗೆ 3.66 ಕೋಟಿ ಪುಸ್ತಕಗಳನ್ನು ಆಯಾ ಶಾಲೆಗಳಿಗೆ ಹಂಚಲಾಗಿದೆ. ಉಳಿದ ಪುಸ್ತಕಗಳನ್ನು ಈ ತಿಂಗಳು ಇಪ್ಪತ್ತನೇ ತಾರೀಕಿನೊಳಗೆ ಪೂರೈಕೆಯಾಗಲಿದೆ.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಬಾಕಿ ಉಳಿದಿದ್ದ ಎರಡೂವರೆ ಲಕ್ಷ ಸೈಕಲ್ ವಿತರಣೆಗೆ ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ ಒಳಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಧ್ಯಾರ್ಥಿಗಳಿಗೆ ಗುಣಮಟ್ಟದ ಶಾಲಾಬ್ಯಾಗ್ ಮತ್ತು ನೋಟ್ ಪುಸ್ತಕ ಖರೀದಿಸಿ ವಿತರಿಸಲು ಆಯಾ ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗೆ ಅಧಿಕಾರ ನೀಡಲಾಗಿದೆ. ಇದಕ್ಕೆ 25 ಕೋಟಿ ಹಣ ಬೇಕಾಗಬಹುದೆಂದು ಅಂದಾಜಿಸಲಾಗಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X