ಪರಿಶಿಷ್ಟ ಜಾತಿ ಕುಟುಂಬ ಸಮೀಕ್ಷೆಗೆ ಅನುದಾನ

ನ್ಯಾ. ಎ.ಜೆ. ಸದಾಶಿವ ಆಯೋಗವು ಬುಧವಾರ ನಗರದ ಕರ್ನಾಟಕ ಆಡಳಿತ ಸೇವಾ ಮತ್ತು ಸಂಶೋಧನಾ ಕೇಂದ್ರದಲ್ಲಿ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ತರಬೇತಿ ಕಾರ್ಯಾಗಾರವನ್ನು ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಉದ್ಘಾಟಿಸಿದ ಸಮಾಜ ಕಲ್ಯಾಣ ಸಚಿವ ಡಿ. ಸುಧಾಕರ್ ಅವರು ಮುಖ್ಯಮಂತ್ರಿಗಳ ಭಾಷಣವನ್ನು ಓದಿದರು.
ಸಂವಿಧಾನ ಮತ್ತು ಇತರ ಕಾನೂನುಗಳಡಿ ಪರಿಶಿಷ್ಟ ಜಾತಿಯವರಿಗೆ ವಿವಿಧ ಸೌಲಭ್ಯಗಳನ್ನು ಸರ್ಕಾರ ನೀಡುತ್ತ ಬಂದಿದೆ. ಆದರೆ ಕಳೆದ 15 ವರ್ಷಗಳಿಂದ ಸರ್ಕಾರದ ಸೌಲಭ್ಯಗಳ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂಬ ಅಭಿಪ್ರಾಯ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳ ನಡುವೆ ಮೂಡಿರುವುದು ವಿಪರ್ಯಾಸ. ಈ ಹಿನ್ನೆಲೆಯಲ್ಲಿ ಸರ್ಕಾರದ ಸೌಲಭ್ಯಗಳು ಪರಿಶಿಷ್ಟ ಜಾತಿಯ ಎಲ್ಲರನ್ನೂ ತಲುಪುತ್ತಿವೆ ಎಂಬುದರ ಅಧ್ಯಯನ ನಡೆಸಲು ನ್ಯಾ. ಎ.ಜೆ. ಸದಾಶಿವ ಆಯೋಗ ಈ ಕುಟುಂಬ ಸಮೀಕ್ಷೆ ನಡೆಸುತ್ತಿದ್ದು ರಾಜ್ಯ ಸರ್ಕಾರ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಪ್ರಾಸ್ತಾವಿಕ ನುಡಿಗಳನ್ನಾಡಿದ ಆಯೋಗದ ಮುಖ್ಯಸ್ಥ ನ್ಯಾ. ಎ.ಜೆ. ಸದಾಶಿವ ಅವರು, ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳ ಸಹಕಾರ ಅಗತ್ಯವೆಂದರು. ಶತಶತಮಾನಗಳಿಂದ ತುಳಿತಕ್ಕೊಳಗಾಗಿರುವ ಪರಿಶಿಷ್ಟ ಜಾತಿಯ ಜನರ ಬದುಕಿನಲ್ಲಿ ವಿಶ್ವಾಸ ಮೂಡಿಸಿ, ಇತರ ವರ್ಗಗಳ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಬೇಕು. ಇದರಲ್ಲಿ ಅಧಿಕಾರಿಗಳ ಪಾತ್ರ ಮಹತ್ವಪೂರ್ಣವಾದುದು ಎಂದು ಅವರು ತಿಳಿಸಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications