ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಹಿಂಸಾಚಾರ: ಮೋದಿಗೆ ಎಸ್‌ಐಟಿ ಕ್ಲೀನ್‌ಚಿಟ್

By Srinath
|
Google Oneindia Kannada News

narendra modi
ಹೊಸದಿಲ್ಲಿ, ಫೆ. 7: ಗುಜರಾತ್ ಹಿಂಸಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ಕೈವಾಡವನ್ನು ಸಾಬೀತುಪಡಿಸಲು ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತನ್ನಲ್ಲಿ ಹೆಚ್ಚಿನ ಸಾಕ್ಷ್ಯಗಳೇನೂ ಇಲ್ಲ ಎಂದು ವಿಶೇಷ ತನಿಖಾ ತಂಡ ಹೇಳಿದೆ. ಎಸ್‌ಐಟಿ ತನ್ನ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದು, ಆ ವರದಿಯಯನ್ನು ಉಲ್ಲೇಖಿಸಿ ತೆಹಲ್ಕಾ ಸುದ್ದಿ ಸಂಸ್ಥೆ ತನ್ನ ವೆಬ್‌ಸೈಟ್ ನಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತನ್ನ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಿದ್ದು, ಹಿಂಸಾಚಾರದಲ್ಲಿ ಮೋದಿ ಭಾಗಿಯಾಗಿದ್ದಾರೆ ಎಂಬುದನ್ನು ದೃಢಪಡಿಸುವ ನಿಟ್ಟಿನಲ್ಲಿ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಕೈಚೆಲ್ಲಿದೆ.

ಒಟ್ಟು 32 ಆರೋಪಗಳ ಬಗ್ಗೆ ತನಿಖೆ ನಡೆಸಲಾಯಿತು. ಮುಖ್ಯಮಂತ್ರಿಯೂ ಸೇರಿದಂತೆ ಅವರ ಸರಕಾರದ ಲೋಪದೋಷಗಳು ಅಥವಾ ಕರ್ತವ್ಯ ಚ್ಯುತಿಗಳ ಬಗ್ಗೆ ತನಿಖೆ ನಡೆಸಲಾಯಿತು. ಆದರೆ ಇವುಗಳ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ' ಎಂದು ಎಸ್‌ಐಟಿ ಮುಖ್ಯಸ್ಥ ಸಿಬಿಐನ ಮಾಜಿ ನಿರ್ದೇಶಕ ಆರ್.ಕೆ. ರಾಘವನ್ ವರದಿಯಲ್ಲಿ ಹೇಳಿದ್ದಾರೆ ಎಂದು ತೆಹಲ್ಕಾ ತಿಳಿಸಿದೆ.

English summary
No evidence found against Chief Minister Modi's involvement in violent attacks on Muslims at Gulbarg Society and elsewhere in Gujath reports Tehelka based on SIT report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X