ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತ 'ಗಣಿಗಾರಿಕೆ' ಬಿರುಗಾಳಿ ಎಬ್ಬಿಸಲಿದೆಯೇ?

By Srinath
|
Google Oneindia Kannada News

Lokayukta Santosh Hegde report on illegal mining on July 23
ಬೆಂಗಳೂರು, ಜುಲೈ18: ರಾಜ್ಯದಲ್ಲಿ 2000 ದಿಂದ 2006ರ ಜುಲೈವರೆಗೆ ನಡೆದಿದೆಯೆನ್ನಲಾದ ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ತನಿಖಾ ವರದಿ ಜುಲೈ 23ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ. ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಸಲ್ಲಿಸಲಿರುವ ಈ ವರದಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸುವ ಲಕ್ಷಣಗಳು ನಿಚ್ಚಳವಾಗಿವೆ.

ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಬಿಜೆಪಿ ಸರ್ಕಾರವು ಈ ತನಿಖೆಯನ್ನು ಲೋಕಾಯುಕ್ತರಿಗೆ ವಹಿಸಿತ್ತು. ಅಕ್ರಮ ಗಣಿಗಾರಿಕೆ ಕುರಿತು 2007ರ ಮಾರ್ಚ್ ತಿಂಗಳಲ್ಲಿ ಆರಂಭವಾಗಿದ್ದ ಲೋಕಾಯುಕ್ತ ತನಿಖೆ ಈಗ ನಿರ್ಣಾಯಕ ಘಟ್ಟ ತಲುಪಿದೆ. ಇನ್ನು, ನ್ಯಾ. ಸಂತೋಷ್ ಹೆಗ್ಡೆ ಅವರು ಆಗಸ್ಟ್ 2ರಂದು ಹುದ್ದೆಯನ್ನು ತ್ಯಜಿಸಲಿದ್ದಾರೆ.

ರಾಜ್ಯದ ಬಳ್ಳಾರಿ, ತುಮಕೂರು, ಚಿತ್ರದುರ್ಗ, ಗದಗ ಮತ್ತಿತರ ಜಿಲ್ಲೆಗಳಲ್ಲಿ ನಡೆದಿರುವ ಕಬ್ಬಿಣದ ಅದಿರು ಗಣಿಗಾರಿಕೆಯ ಬಗ್ಗೆ ಈ ತನಿಖೆ ಪ್ರಮುಖವಾಗಿ ಕೇಂದ್ರೀಕೃತವಾಗಿತ್ತು. 2000ರ ಜ. 1ರಿಂದ ನಡೆದಿರುವ ಅಕ್ರಮ ಗಣಿಗಾರಿಕೆ, ಅಕ್ರಮ ಅದಿರು ಸಾಗಾಣಿಕೆ ಮತ್ತು ರಫ್ತು ಕುರಿತ ತನಿಖಾ ವರದಿ ಇದಾಗಿದೆ. ಮೂರು ವರ್ಷ ನಾಲ್ಕು ತಿಂಗಳ ಕಾಲ ನಡೆದ ತನಿಖೆಯ ಸಮಗ್ರ ವರದಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಕೈಸೇರಲಿದೆ.

ಲೋಕಾಯುಕ್ತರ ತನಿಖಾ ವರದಿ ಸಲ್ಲಿಕೆಯ ಬಗ್ಗೆಯೇ ಕೆಲ ದಿನಗಳಿಂದ ವ್ಯಾಪಕ ಚರ್ಚೆ ನಡೆಯುತ್ತಿದೆ. ಎಸ್ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ, ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ, ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರ ಮತ್ತು ಈಗ ಅಧಿಕಾರದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯನ್ನು ಈ ತನಿಖೆ ಕೇಂದ್ರೀಕರಿಸಿದೆ. ಈ ನಡುವೆ ರಾಜ್ಯಪಾಲರ ಆಡಳಿತವಿದ್ದ ದಿನಗಳ ಬಗ್ಗೆಯೂ ತನಿಖೆ ನಡೆದಿದೆ.

English summary
The report of the inquiry conducted by Lokayukta Justice N Santosh Hegde into the mining scam in the state is to be submitted on July 23. Will it storm the political scenario in the state is the mute question.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X