ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದ ಕನ್ನಡ ಮಂತ್ರಿಗಳ ಕಿವಿಗೆ ಈ ಪ್ರಶ್ನೆ

By * ವಸಂತ್ ಶೆಟ್ಟಿ, ಬೆಂಗಳೂರು
|
Google Oneindia Kannada News

ಕೇಂದ್ರ ಮತ್ತು ಆಂಧ್ರ ಪ್ರದೇಶ ಸರ್ಕಾರದ ಜಂಟಿ ಒಡೆತನದಲ್ಲಿರುವ ಸಿಂಗರೇಣಿ ಗಣಿಯಿಂದ ಕಲ್ಲಿದ್ದಲು ತರಿಸಿಕೊಳ್ಳಲು ಕರ್ನಾಟಕ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.

ಆ ಗಣಿಯ ಕಲ್ಲಿದ್ದಲ್ಲಿನ ಮೇಲೆ ನಮಗೆ ಇಂತಹದೊಂದು ಅವಲಂಬನೆ ಇರುವಾಗ ಒಪ್ಪಂದ ಮಾಡಿಕೊಂಡ ರಾಜ್ಯಗಳಿಗೆ ಒಪ್ಪಂದದನ್ವಯ ಸಮರ್ಪಕ ಕಲ್ಲಿದ್ದಲು ಪೂರೈಸಲು ಯಾವ ಕ್ರಮವನ್ನು ಯಾಕೆ ಕೈಗೊಂಡಿಲ್ಲ?

ಒಂದು ರಾಜ್ಯದ ಆರ್ಥಿಕತೆಯನ್ನೇ ಬುಡಮೇಲು ಮಾಡುವಂತಹ ಇಂತಹ ಗಂಭೀರ ಸಮಸ್ಯೆ ಬಂದಾಗಲೂ ಮಧ್ಯ ಪ್ರವೇಶಿಸಿ ಪರಿಹಾರ ನೀಡುವಂತೆ ತಾವುಗಳು ಯಾಕೆ ಮನವಿ ಮಾಡಿಲ್ಲ?

ಪಡೆದ ಕಲ್ಲಿದ್ದಲಿಗೆ ಹಣ ಪಾವತಿಸುವಾಗ ಕರ್ನಾಟಕವೂ ಹೀಗೆ ಬೇಕಾಬಿಟ್ಟಿ ವರ್ತಿಸಿದರೆ ನಿಮ್ಮ ಕೇಂದ್ರ ಸರ್ಕಾರ ಕೇಳುವುದೇ?

ಆಂಧ್ರದ ಮುಖ್ಯಮಂತ್ರಿ ಮನವಿ ಮಾಡಿದ ತಕ್ಷಣ ಅಲ್ಲಿಗೆ ಪೂರ್ವ ಗ್ರಿಡ್ ನಿಂದ 800 ಮೆಗಾ ವ್ಯಾಟ್ ವಿದ್ಯುತ್ ಪೂರೈಸಲು ಮುಂದಾಗುವ ಕೇಂದ್ರ ಕರ್ನಾಟಕದ ಮನವಿಗೆ ಸ್ಪಂದಿಸದಿರುವುದು ಏನು ತೋರಿಸುತ್ತೆ?

ಒಕ್ಕೂಟದಲ್ಲಿ ಎಲ್ಲ ರಾಜ್ಯಗಳನ್ನು ಸಮಾನವಾಗಿ ಕಾಣಬೇಕಾದವರು ತಮ್ಮ ಪಕ್ಷದ ಆಡಳಿತ ಇರುವ ರಾಜ್ಯದ ನೋವಿಗೆ ಮಾತ್ರ ಸ್ಪಂದಿಸುವುದು ಒಕ್ಕೂಟಕ್ಕೆ ಬಗೆಯುತ್ತಿರುವ ಅಪಚಾರವಲ್ಲವೇ?

ಇದರ ಬಗ್ಗೆ ತಮ್ಮ ಸರ್ಕಾರದ ಗಮನ ತಾವುಗಳು ಯಾಕೆ ಸೆಳೆದಿಲ್ಲ? ಓರಿಸ್ಸಾ, ಮಹಾರಾಷ್ಟ್ರಗಳಿಂದ ಕಲ್ಲಿದ್ದಲು ಆಮದು ಮಾಡಿಕೊಳ್ಳೊಣವೆಂದರೆ ಸರಿಯಾದ ರೈಲ್ವೇ ಮಾರ್ಗಗಳು ಇಲ್ಲದಿರುವುದೇ ಸಮಸ್ಯೆಯಾಗಿದೆ ಅನ್ನುವುದು ಶೋಭಾ ಕರಂದ್ಲಾಜೆಯವರ ಹೇಳಿಕೆ.

ಹಾಗಿದ್ದಲ್ಲಿ, ರಾಜ್ಯದ ರೈಲ್ವೇ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ನಿಮ್ಮದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಇದಕ್ಕಿಂತ ಒಳ್ಳೆಯ ಸಂದರ್ಭವುಂಟೇ?

ಪರಸ್ಪರ ಕೆಸರೆರಚಾಟ, ರಾಜಕೀಯ ಮೇಲಾಟ ಬಿಟ್ಟು ಇನ್ನಾದರೂ ಒಂದು ಧ್ವನಿಯಲ್ಲಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಯತ್ನ ಮಾಡಿದ್ರೆ ಕತ್ತಲಲ್ಲಿ ಕೈ ತೊಳೆಯುತ್ತಿರುವ ನಮ್ಮ ಜನರು, ಉದ್ದಿಮೆಗಳು, ರೈತರು, ವಿದ್ಯಾರ್ಥಿಗಳು ಎಲ್ಲರೂ ನಿಟ್ಟುಸಿರು ಬಿಟ್ಟಾರು. ಮಾಡ್ತಿರಾ ಅಧಿನಾಯಕರೇ, ದೊರೆಸಾನಿಗಳೇ ?

English summary
Load Shedding and power shortage in Karnataka has once again raised many questions to Congress led UPA government and Karnataka MPs and Union Ministers in sanctioning the grants to Karnataka. RTPS and BESCOM, KPTCL work plan and utilization.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X