ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಶಾಲೆಗಳ ಪರ ದನಿಯೆತ್ತಿದ ಸಾಹಿತಿಗಳು

By Prasad
|
Google Oneindia Kannada News

ಬೆಂಗಳೂರು, ಡಿ. 3 : ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳು ಕಡೆಗೂ ಕನ್ನಡ ಶಾಲೆಗಳ ಪರ ದನಿ ಎತ್ತಿದ್ದಾರೆ. ಐದು ವಿದ್ಯಾರ್ಥಿಗಳಿಗಿಂತ ಕಡಿಮೆಯಿರುವ ಶಾಲೆಗಳನ್ನು ಮುಚ್ಚಬೇಕೆಂಬ ಸರಕಾರಿ ಆದೇಶದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ, ಡಾ. ಯುಆರ್ ಅನಂತಮೂರ್ತಿ, ಡಾ. ಗಿರೀಶ್ ಕಾರ್ನಾಡ್ ಮತ್ತು ರಾಷ್ಟ್ರಕವಿ ಡಾ. ಜಿಎಸ್ ಶಿವರುದ್ರಪ್ಪ ಅವರು ಜಂಟಿಯಾಗಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಸರಕಾರಿ ಆದೇಶಕ್ಕೆ ತಡೆ ನೀಡಬೇಕೆಂದು ಕೋರಿದ್ದಾರೆ.

ಈ ಅರ್ಜಿಯ ವಿಚಾರಣೆ ಮುಂದಿನ ವಾರದ ಆರಂಭದಲ್ಲಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಒಟ್ಟು 590 ಪ್ರಾಥಮಿಕ ಶಾಲೆಗಳಲ್ಲಿ ಮತ್ತು 27 ಮಾಧ್ಯಮಿಕ ಶಾಲೆಗಳಲ್ಲಿ ಐದಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಐದರಿಂದ ಹತ್ತು ವಿದ್ಯಾರ್ಥಿಗಳಿರುವ ಶಾಲೆಗಳ ಸಂಖ್ಯೆ 1,500. ಈ ಎಲ್ಲ ಶಾಲೆಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯುಂಟಾಗುತ್ತದೆ ಎಂದು ರಿಟ್ ನಲ್ಲಿ ಸಾಹಿತಿಗಳು ತಿಳಿಸಿದ್ದಾರೆ.

English summary
Kannada laureates Chandrashekar Kambar, UR Anantha Murthy, Girish Karnad and GS Shivarudrappa have jointly filed public interest litigation against circular of Karnataka govt closing Kannada schools in Karnataka, which have less students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X