ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

3 ತಿಂಗಳಲ್ಲಿ 10,000 ಗುತ್ತಿಗೆ ಪೌರ ಕಾರ್ಮಿಕರ ಖಾಯಂ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜೂನ್ 23 : ಹಲವು ದಿನಗಳಿಂದ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಬೇಕೆಂಬ ಕೂಗಿಗೆ ಕೊನೆಗೂ ರಾಜ್ಯ ಸರ್ಕಾರ ಕಿವಿ ಕೊಟ್ಟಿದೆ.

ಸುಮಾರು 11 ಸಾವಿರ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.

10,000 contract pourakarmikas will be regularised in next 3 months:Siddaramaiah

ಹಲವು ದಿನಗಳಿಂದ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರ ಸೇವಾ ನೌಕರರ ಸಂಘ ಪ್ರತಿಭಟನೆ ನಡೆಸುತ್ತಿದ್ದವು.

ವಿಧಾಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪೌರ ಕಾರ್ಮಿಕರ ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.

ಮುಂದಿನ ಮೂರು ತಿಂಗಳಲ್ಲಿ ಮೊದಲ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳಲಾಗುವುದು. ಉಳಿದ 1 ಸಾವಿರ ಪೌರ ಕಾರ್ಮಿಕರ ನೇಮಕವನ್ನು ನಂತರ ಖಾಯಂಗೊಳಿಸಲಾಗುವುದು ಎಂದು ತಿಳಿಸಿದರು.

ಪೌರಕಾರ್ಮಿಕರಿಗೆ ಮಧ್ಯಾಹ್ನದ ಊಟದ ಜತೆಗೆ ಒಂದು ದಿನದ ರಜೆ ನೀಡಲಾಗುವುದು. ಪೌರ ಕಾರ್ಮಿಕರು ದುಷ್ಚಟಗಳಿಂದ ದೂರವಿರಬೇಕು. ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಮ್ಯಾನ್‌ ಹೋಲ್‌ಗೆ ಇಳಿಯಬಾರದು ಎಂದು ಸಲಹೆ ನೀಡಿದರು.

ಇದೇ ವೇಳೆ ಪೌರ ಕಾರ್ಮಿಕರಿಗೆ ಜೀವ ವಿಮೆ, ಆರೋಗ್ಯ ಹಾಗೂ ಬಿಸಿ ಊಟ ಸೇರಿದಂತೆ ಇತರೆ ಸರ್ಕಾರಿ ಉದ್ಯೋಗಿಗಳಿಗೆ ದೊರೆಯುವಂತಹ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಆದೇಶ ಹೊರಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

English summary
The state government will regularise the services of 10,000 contract pourakarmikas in the next three months, Chief Minister Siddaramaiah announced here on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X