ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ

|
Google Oneindia Kannada News

ಬೆಂಗಳೂರು, ಜುಲೈ 06 : 'ಮುಂದಿನ ಎರಡು ವರ್ಷಗಳಲ್ಲಿ 220 ಕಿ.ಮೀ ಉದ್ದದ ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲಾಗುತ್ತದೆ. ಇದರಿಂದಾಗಿ ರಸ್ತೆಗಳು ಸುಮಾರು 25 ರಿಂದ 30 ವರ್ಷಗಳವರೆಗೆ ಬಾಳಿಕೆ ಬರಲಿದೆ' ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಬುಧವಾರ ಕಸ್ತೂರ ಬಾ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಸಚಿವರು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, 'ಮೊದಲ ಹಂತದಲ್ಲಿ 650 ಮೀಟರ್ ಉದ್ದದ ರಸ್ತೆಯನ್ನು 2.40 ಕೋಟಿ ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲಾಗುತ್ತಿದೆ' ಎಂದು ತಿಳಿಸಿದರು. [ಚಾಲುಕ್ಯ ವೃತ್ತ-ಹೆಬ್ಬಾಳ ಉಕ್ಕಿನ ಸೇತುವೆ ಯೋಜನೆಗೆ ಅಸ್ತು]

kj george

'ಕಸ್ತೂರ ಬಾ ರಸ್ತೆಯ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಂದಿನ ಎರಡು ವರ್ಷಗಳಲ್ಲಿ 800 ಕೋಟಿ ವೆಚ್ಚದಲ್ಲಿ 220 ಕಿ.ಮೀ.ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲಾಗುತ್ತದೆ' ಎಂದು ಹೇಳಿದರು. [ಬೆಂ-ಮೈಸೂರು 6 ಪಥದ ರಸ್ತೆ, ಭೂ ಸ್ವಾಧೀನ ಆರಂಭ]

'ನಗರದಲ್ಲಿ ಸಂಚಾರ ದಟ್ಟಾಣೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ 216 ರಸ್ತೆಗಳನ್ನು ಅಗಲೀಕರಣ ಮಾಡಲು ಯೋಜನೆ ರೂಪಿಸಲಾಗಿದೆ. ಆದರೆ, ಟಿಡಿಆರ್ (ರಸ್ತೆ ವಿಸ್ತರಣೆ ಮತ್ತಿತರ ಉದ್ದೇಶಗಳಿಗೆ ಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಪರಿಹಾರ ರೂಪದಲ್ಲಿ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ದರ ಕಡಿಮೆ ಎಂದು ಕೆಲವು ಆಸ್ತಿಗಳ ಮಾಲೀಕರು ಒಪ್ಪಿಗೆ ನೀಡುತ್ತಿಲ್ಲ. ಟಿಡಿಆರ್ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ 15 ದಿನದಲ್ಲಿ ತೀರ್ಮಾನ ತೆಗೆದುಕೊಳ್ಳಲಿದೆ' ಎಂದರು.

bbmp

'ರಸ್ತೆಗಾಗಿ ಆಸ್ತಿ ಕಳೆದುಕೊಳ್ಳುವ ಮಾಲೀಕರಿಗೆ ಟಿಡಿಆರ್ ದರ ಹೆಚ್ಚವಾಗುವಂತೆ ಬಿಬಿಎಂಪಿ ನಿರ್ಧಾರ ಕೈಗೊಳ್ಳಲಿದೆ. ಅನಗತ್ಯವಾಗಿ ರಸ್ತೆಗಳಿಗೆ ಅಗಲೀಕರಣದ ಗುರುತು ಮಾಡಲಾಗುತ್ತಿರುವ ಬಗ್ಗೆ ಕೆಲವರು ಆಕ್ಷೇಪ ಎತ್ತಿದ್ದಾರೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತದೆ' ಎಂದು ಜಾರ್ಜ್ ಹೇಳಿದರು. [ಬೆಂಗಳೂರು ನಗರಕ್ಕೊಂದು 10 ಪಥದ ರಸ್ತೆ]

ಏನಿದು ವೈಟ್ ಟಾಪಿಂಗ್? : ಡಾಂಬರು ರಸ್ತೆಯ ಮೇಲು ಹೊದಿಕೆಯನ್ನು ತೆಗೆದು, ಅದಕ್ಕೆ ಕಾಂಕ್ರೀಟ್ ಹೊದಿಕೆ ಅಳವಡಿಕೆ ಮಾಡುವುದನ್ನು ವೈಟ್ ಟಾಪಿಂಗ್ ಎಂದು ಕರೆಯಲಾಗುತ್ತದೆ. ಬೆಂಗಳೂರಿನ ಹಲವು ರಸ್ತೆಗಳಿಗೆ ಈಗಾಗಲೇ ವೈಟ್ ಟಾಪಿಂಗ್ ಮಾಡಲಾಗಿದೆ. ವೈಟ್ ಟಾಪಿಂಗ್ ಮಾಡಿದ ರಸ್ತೆ ಹಲವು ವರ್ಷಗಳ ಕಾಲ ಬಾಳಿಕೆ ಬರುತ್ತದೆ ಎನ್ನುತ್ತಾರೆ ತಜ್ಞರು.

road
English summary
220 km of road will be developed under white topping technology said Bengaluru Development Minister K.J.George on July 6, 2016. K.J.George today inspected white topping work from Hudson circle to Siddalingaiah circle on Kasturba road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X