ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಮಾನದ ಟಾಯ್ಲೆಟ್ ನಲ್ಲಿ ಬಚ್ಚಿಟ್ಟಿದ್ದ ಆರು ಕೆಜಿ ಚಿನ್ನ ಬೆಂಗಳೂರಿನಲ್ಲಿ ವಶ

ವಿಮಾನ ಶೌಚಾಲಯದಲ್ಲಿ ಬಚ್ಚಿಟ್ಟಿದ್ದ ಆರು ಕೆಜಿ ಚಿನ್ನವನ್ನು ಬೆಂಗಳೂರು ವಿಮನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈಚೆಗೆ ಚಿನ್ನ ಕಳ್ಳ ಸಾಗಣೆ ಪ್ರಮಾಣ ತುಂಬ ಹೆಚ್ಚಾಗಿದೆ.

By ಅನುಷಾ ರವಿ
|
Google Oneindia Kannada News

ಬೆಂಗಳೂರು, ಏಪ್ರಿಲ್ 11: ಬೆಂಗಳೂರಿಗೆ ಬಂದ ವಿಮಾನದಲ್ಲಿ ಬಚ್ಚಿಟ್ಟಿದ್ದ 6 ಕೆಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನವದೆಹಲಿಯಿಂದ ಬಂದ ವಿಮಾನದ ಶೌಚಾಲಯದಲ್ಲಿ ಬಚ್ಚಿಟ್ಟಿದ್ದ ಆರು ಕೆಜಿ ಚಿನ್ನವನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.

ಕಳ್ಳಸಾಗಣೆ ಪತ್ತೆ ಹಚ್ಚುವ ಪ್ರಕ್ರಿಯೆ ತೀವ್ರವಾಗಿರುವುದರಿಂದ ದಂಧೆಕೋರರು ಸಹ ವಸ್ತುಗಳನ್ನು ಬಚ್ಚಿಡಲು ನಾನಾ ಸ್ಥಳಗಳನ್ನು ಹುಡುಕುತ್ತಿದ್ದಾರೆ. ಈ ವರ್ಷ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಮುಂಬೈನಿಂದ ಬರುತ್ತಿದ್ದ ಮಹಿಳೆಯೊಬ್ಬಳನ್ನು ಬಂಧಿಸಿ, ಆಕೆಯಿಂದ 1.14 ಕೋಟಿ ರುಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ತುಂಡುಗಳನ್ನು ವಶಕ್ಕೆ ಪಡೆದಿದ್ದರು.[ಸ್ಮಗಲ್ಲಿಂಗ್ ಲೋಕದ ಲೇಡಿ ಡಾನ್ ಸಂಗೀತಾ ಅಂದರ್!]

6 kg gold concealed in toilet of Bengaluru-bound flight

ಅದೇ ರೀತಿ 1.21 ಕೋಟಿ ರುಪಾಯಿ ಮೌಲ್ಯದ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಈಚೆಗೆ ವಶಪಡಿಸಿಕೊಳ್ಳಲಾಗಿತ್ತು. ಇನ್ನು 71.66 ಲಕ್ಷ ಮೌಲ್ಯದ ಚಿನ್ನವನ್ನು ದುಬೈನಿಂದ ಬಂದ ವಿಮಾನದ ಸೀಟಿನ ಕೆಳಗೆ ಅಡಗಿಸಿಟ್ಟಿದ್ದನ್ನು ಪತ್ತೆ ಹಚ್ಚಲಾಗಿತ್ತು. ಅದೇ ರೀತಿ ಐವತ್ತು ಲಕ್ಷ ರುಪಾಯಿ ಬೆಲೆ ಬಾಳುವ ಚಿನ್ನವನ್ನು ದುಬೈನಿಂದ ತರುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿತ್ತು.

English summary
Officials from the Directorate of Revenue Intelligence recovered gold concealed onboard a Bengaluru-bound flight. 6 kilos of gold was found concealed in the plane's toilet by officials from New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X