ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಪೇಗೌಡ ಬಡಾವಣೆಯಲ್ಲಿ ಸೈಟ್ ಪಡೆಯಲು ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೆಂಪೇಗೌಡ ಬಡಾವಣೆಯಲ್ಲಿನ ನಿವೇಶನಗಳನ್ನು ಹಂಚಿಕೆ ಅರ್ಜಿಗಳನ್ನು ಆಹ್ವಾನಿಸಿದೆ. ಬಡಾವಣೆಯಲ್ಲಿನ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ.

ಬಿಡಿಎ ಸೋಮವಾರ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಮಂಗಳವಾರದಿಂದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಅರ್ಜಿಗಳು ಲಭ್ಯವಿದೆ. ಇತ್ತೀಚೆಗೆ ನಡೆದ ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಒಪ್ಪಿಗೆ ಪಡೆದು ನಿವೇಶನಗಳ ಬೆಲೆಗಳನ್ನು ನಿಗದಿಪಡಿಸಲಾಗಿದೆ. [ದುಬಾರಿಯಾಗಲಿದೆ ಆಸ್ತಿ ಖರೀದಿ]

bda

ಮೈಸೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವೆ ಬಿಡಿಎ ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನು ನಿರ್ಮಾಣ ಮಾಡಿದೆ. ಮೊದಲ ಹಂತದಲ್ಲಿ 5 ಸಾವಿರ ನಿವೇಶಗಳನ್ನು ಹಂಚಿಕೆ ಮಾಡಲು ಬಿಡಿಎ ನಿರ್ಧರಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ. [ಶೇ 20ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲಿದೆ ಬಿಬಿಎಂಪಿ]

ನಿವೇಶನಗಳ ದರಗಳು : ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ನಿವೇಶನಗಳ ದರಗಳನ್ನ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದವರು 20x30ರ ನಿವೇಶನಕ್ಕೆ ಚದರ ಅಡಿಗೆ ರೂ. 1,800 ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರು ರೂ. 900 ಪಾವತಿ ಮಾಡಬೇಕಾಗಿದೆ.

30x40ರ ನಿವೇಶನಕ್ಕೆ ಚದರ ಅಡಿಗೆ 2000 ರೂ., 40x60ರ ನಿವೇಶನಕ್ಕೆ ಚದರ ಅಡಿಗೆ 2,200 ಮತ್ತು 50x80ರ ನಿವೇಶನಕ್ಕೆ ಚದರ ಅಡಿಗೆ 2,500 ರೂ. ದರ ನಿಗದಿಪಡಿಸಲಾಗಿದೆ.

English summary
Bangalore Development Authority (BDA) has invited applications for sites in the Kempegowda Layout. Applications available at all nationalized banks. Citizens can apply for 5,000 sites that will be available in general as well as reservation categories.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X