ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ದೋಸ್ತಿ ಮಾತುಕತೆ, ಕಾಂಗ್ರೆಸ್‌ನಲ್ಲಿ ಎರಡು ಬಣ?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಸೆ. 02 : ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಗದ್ದುಗೆ ಏರಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ. ಪಕ್ಷದ ಹೈಕಮಾಂಡ್ ನಾಯಕರಿಗೆ ಈ ಕುರಿತು ಮಾಹಿತಿ ನೀಡಿ, ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಮೈತ್ರಿ ಕುರಿತು ಕಾಂಗ್ರೆಸ್‌ನಲ್ಲಿ ಎರಡು ಬಣ ಸೃಷ್ಟಿಯಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ದೋಸ್ತಿ ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. [ಮೇಯರ್ ಹುದ್ದೆಗೆ ಮ್ಯಾಜಿಕ್ ನಂಬರ್ 131]

congress

ಬಿಬಿಎಂಪಿ ಚುನಾವಣೆ ಫಲಿತಾಂಶ ಬಂದ ಬಳಿಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 14 ಸ್ಥಾನಗಳನ್ನು ಗಳಿಸಿರುವ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಘೋಷಿಸಿದೆ. ಚುನಾವಣೆಯಲ್ಲಿ ಜಯಗಳಿಸಿರುವ ಪಕ್ಷೇತರರನ್ನು ಸೇರಿಸಿಕೊಂಡು ಮೈತ್ರಿ ಮಾಡಿಕೊಳ್ಳುವುದು ಕಾಂಗ್ರೆಸ್ ನಿಲುವಾಗಿದೆ. [ಮೇಯರ್ ಹುದ್ದೆಗೆ ಮತದಾನ, ಕೋರ್ಟ್ ಮೊರರ ಹೋದ ಬಿಜೆಪಿ]

ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿಲ್ಲ. ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಬಹುದು. ಜೆಡಿಎಸ್ ಜೊತೆ ಮೈತ್ರಿ ಏಕೆ? ಎಂಬ ಅಭಿಪ್ರಾಯ ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ ಅವರದ್ದು. ಆದ್ದರಿಂದ, ಇಬ್ಬರು ನಾಯಕರು ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎನ್ನುವುದು ತಾಜಾ ಮಾಹಿತಿ. [ಕಾಂಗ್ರೆಸ್ ಜೊತೆ ಮೈತ್ರಿ, ಗೌಡರು ಹೇಳುವುದೇನು?]

ಅಂತಿಮ ನಿರ್ಧಾರ ಇನ್ನೂ ಆಗಿಲ್ಲ : ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕಾಂಗ್ರೆಸ್ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ವರದಿಯನ್ನು ಪರಮೇಶ್ವರ ಅವರು ಈಗಾಗಲೇ ಹೈಕಮಾಂಡ್‌ಗೆ ಕಳುಹಿಸಿ ಕೊಟ್ಟಿದ್ದಾರೆ.

ಮೈತ್ರಿ ಕುರಿತು ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು, ಹೈಕಮಾಂಡ್‌ ನಾಯಕರಿಗೆ ಈ ಕುರಿತು ವಿವರಣೆ ನೀಡಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ಸಿಕ್ಕರೆ ಮೈತ್ರಿ ಮಾತುಕತೆ ಮುಂದುವರೆಯಲಿದೆ. ಮೈತ್ರಿ ಇಲ್ಲದಿದ್ದರೆ ಮುಂದೇನು?, ಕಾಲವೇ ಉತ್ತರ ನೀಡಲಿದೆ.

ಭಾನುವಾರ ಗೌಡರ ಜೊತೆ ಮಾತುಕತೆ : ಒಂದು ವೇಳೆ ಹೈಕಮಾಂಡ್ ನಾಯಕರು ಜೆಡಿಎಸ್ ಜೊತೆಗಿನ ಮೈತ್ರಿಗೆ ಒಪ್ಪಿಗೆ ನೀಡಿದರೆ. ಸೆ.6ರ ಭಾನುವಾರ ಜೆಡಿಎಸ್ ರಾಷ್ಟ್ರಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನಡುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ. ಸೆ.5ರಂದು ಜೆಡಿಎಸ್ ನಾಯಕರ ಸಭೆಯನ್ನು ಗೌಡರು ಕರೆದಿರುವುದರಿಂದ ಸೆ.6ರ ಭೇಟಿ ಮಹತ್ವ ಪಡೆದುಕೊಂಡಿದೆ.

English summary
Karnataka Chief Minister Siddaramaiah is expected to leave for New Delhi to appraise the Congress High Command about the developments post the BBMP elections. The party however is a divided house on the issue. G Parameshwar and Mallikarjuna Kharge opposing this move.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X