ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆ: 40 ವಾರ್ಡ್ ಗಳ ಪೂರ್ವ ತಯಾರಿ ವರದಿ

By Mahesh
|
Google Oneindia Kannada News

ಬೆಂಗಳೂರು, ಆಗಸ್ಟ್ 02: ಬೆಂಗಳೂರು ನಗರ ಜಿಲ್ಲೆಗೆ ಒಳಪಡುವ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 40 ವಾರ್ಡ್ ಗಳಲ್ಲಿ ಬಿಬಿಎಂಪಿ ಚುನಾವಣೆಗೆ ನಡೆದಿರುವ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ವಿ. ಶಂಕರ್ ಅವರು ವಿವರಣೆ ನೀಡಿದ್ದಾರೆ.

ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಆಗಸ್ಟ್ 3 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 1,656 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು. [ಬಿಬಿಎಂಪಿ: ಕಾರ್ಪೊರೇಟರ್ಸ್ ಅಂಕಪಟ್ಟಿಗಾಗಿ ಸಮೀಕ್ಷೆ]

ಚುನಾವಣಾಧಿಕಾರಿಗಳು: ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 40 ವಾರ್ಡ್ ಗಳಿಗೆ 11 ಚುನಾವಣಾಧಿಕಾರಿಗಳು, 11 ಹೆಚ್ಚುವರಿ ಚುನಾವಣಾಧಿಕಾರಿಗಳು, 40 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

V Shankar

ಈ ವಾರ್ಡ್ ಗಳಿಗೆ ವೀಕ್ಷಕರಾಗಿ ಆರು ಮಂದಿ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ಹಾಗೂ ವಿಶೇಷ ವೀಕ್ಷಕರಾಗಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ಆಯೋಗವು ನೇಮಕ ಮಾಡಿದೆ. [ಬಿಬಿಎಂಪಿ ಚುನಾವಣೆ ವೇಳಾಪಟ್ಟಿ ಘೋಷಣೆ]

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು 17 ಮಂದಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ನೀತಿ ಸಂಹಿತ ತಂಡ ಹಾಗೂ ಸೆಕ್ಟರಲ್ ಅಧಿಕಾರಿಗಳ ತಂಡಗಳನ್ನು ವಿಧಾನಸಭಾ ಕ್ಷೇತ್ರವಾರು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮತದಾರರ ಸಂಖ್ಯೆ:
ಈ 40 ವಾರ್ಡ್ ಗಳಲ್ಲಿ 18,56,002 ಮತದಾರರಿದ್ದು, ಅವರಲ್ಲಿ 9,93,965 ಗಂಡಸರು, 8,61,665 ಮಹಿಳೆಯರು ಮತ್ತು 372 ಇತರ ಮತದಾರರು. ನಾಮಪತ್ರ ಸಲ್ಲಿಕೆಯ ಕೊನೆಯ ದಿನದ ವರೆಗೆ ಮತದಾರರ ಪಟ್ಟಿಗೆ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. [ಬಿಬಿಎಂಪಿ ವಿಭಜನೆ ವಿಧೇಯಕ ರಾಷ್ಟ್ರಪತಿಗಳಿಗೆ ರವಾನೆ]

ಭದ್ರತಾ ವ್ಯವಸ್ಥೆ:
ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಪವಿಭಾಗಾಧಿಕಾರಿಗಳು, ಎಸಿಪಿಗಳು, ತಹಸೀಲ್ದಾರರ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ನುಡಿದರು.

ಚುನಾವಣಾ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಈಗಾಗಲೇ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಿಗೆ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ಅಗತ್ಯ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಲಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ವಿಕಾಸ್ ಕುಮಾರ್ ಅವರು ತಿಳಿಸಿದರು.

English summary
BBMP Election : Bengaluru city district commissioner V Shankar press meet highlights on the preparations going on in all 6 assembly constitution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X