ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ 100ಕ್ಕೂ ಅಧಿಕ ಸ್ಕೈವಾಕ್ ನಿರ್ಮಾಣ: ಜಾರ್ಜ್

ಜನನಿಬಿಡ ರಸ್ತೆಗಳಲ್ಲಿರಸ್ತೆ ದಾಟಲು ಪರದಾಡುವ ಮಕ್ಕಳು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ನಾಗರಿಕರ ಅನುಕೂಲಕ್ಕಾಗಿ ಇನ್ನೂ 100 ಸ್ಕೈವಾಕ್ ನಿರ್ಮಾಣ ಮಾಡಲಾಗುವುದು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೇಳಿದರು.

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 23: ಜನನಿಬಿಡ ರಸ್ತೆಗಳಲ್ಲಿರಸ್ತೆ ದಾಟಲು ಪರದಾಡುವ ಮಕ್ಕಳು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ನಾಗರಿಕರ ಅನುಕೂಲಕ್ಕಾಗಿ ಇನ್ನೂ 100 ಸ್ಕೈವಾಕ್ ನಿರ್ಮಾಣ ಮಾಡಲಾಗುವುದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರು ಘೋಷಿಸಿದ್ದಾರೆ.

ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ರಸ್ತೆಗಳಲ್ಲಿ ಮೊದಲ ಹಂತದಲ್ಲಿ 18 ಸ್ಕೈ ವಾಕ್ ಗಳನ್ನು ನಿರ್ಮಾಣ ಮಾಡಲಾಗುವುದು, ಎಲಿವೇಟರ್ ಯುಕ್ತ ಸ್ಕೈವಾಕ್ ಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ ಎಂದರು.

ಹಳೆ ವಿಮಾನ ನಿಲ್ದಾಣ ರಸ್ತೆಯ ದೊಮ್ಮಲೂರು ವೃತ್ತದಲ್ಲಿ ನಿರ್ಮಿಸಲಾಗಿರುವ ಸ್ಕೈವಾಕ್ ಲೋಕಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

Bengaluru to get 100 more skywalks : KJ George

ನಗರ ಬೆಳೆದಂತೆ ವಾಹನ ಸಂಖ್ಯೆಯೂ ಹೆಚ್ಚಾಗುತ್ತಿದೆ. ವಾಹನ ದಟ್ಟಣೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಾಹನ ದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಬಿಬಿಎಂಪಿ ವತಿಯಿಂದ ಸ್ಕೈವಾಕ್‍ಗಳನ್ನು ನಿರ್ಮಿಸಲಾಗುತ್ತದೆ ಎಂದರು.

ದೊಮ್ಮಲೂರಿನಲ್ಲಿ ನಿರ್ಮಿಸಿರುವ ಸ್ಕೈವಾಕ್ ಒಂಬತ್ತನೆಯದು. ಅದೇ ರೀತಿ ನಗರದ ಇನ್ನಿತರ ಹದಿನೆಂಟು ಕಡೆ ಸ್ಕೈವಾಕ್ ನಿರ್ಮಿಸುವಂತೆ ಪಾಲಿಕೆಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು. ವಾಹನ ದಟ್ಟಣೆ ಹೆಚ್ಚಾಗಿರುವ ಬಳ್ಳಾರಿ ರಸ್ತೆಯ ಎಸ್ಟೀಮ್ ಮಾಲ್ ಬಳಿ, ಡಬಲ್ ರೋಡ್‍ನಂತಹ ಸೂಕ್ತ ಪ್ರದೇಶಗಳಲ್ಲಿ ಸ್ಕೈವಾಕ್‍ಗಳನ್ನು ನಿರ್ಮಿಸಲಾಗುವುದು ಎಂದರು.

ಈ ಎಲ್ಲಾ ಸ್ಕೈವಾಕ್‍ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತದೆ. ಇದರಿಂದ ಪಾಲಿಕೆ ಬೊಕ್ಕಸಕ್ಕೆ ಹೊರೆಯಾಗುವುದಿಲ್ಲ. ಗುತ್ತಿಗೆದಾರರೇ ಸ್ಕೈವಾಕ್ ನಿರ್ಮಾಣ ಮಾಡಿ ಅವುಗಳ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಸ್ಕೈವಾಕ್‍ಗಳ ಮೇಲಿನ ಜಾಹಿರಾತುಗಳಿಂದ ಬರುವ ಆದಾಯದಲ್ಲಿ ಬಿಬಿಎಂಪಿಗೆ ನೆಲ ಬಾಡಿಗೆ ಹಾಗೂ ಜಾಹೀರಾತು ತೆರಿಗೆ ಹಣವು ಬರುತ್ತದ ಎಂದು ಮೇಯರ್ ಪದ್ಮಾವತಿ ಹೇಳಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಜಿ.ಪದ್ಮಾವತಿ, ಶಾಸಕ ರಘು, ಆಡಳಿತ ಪಕ್ಷದ ನಾಯಕ ಮಹಮದ್ ರಿಜ್ವಾನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Bengaluru Development minister KJ George on Wednesday said that the government will build 100 more pedestrian skywalks in different parts of the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X