ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೇ 20ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲಿದೆ ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 16 : ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆ ಒಪ್ಪಿಗೆ ಸೂಚಿಸಿದೆ. ಏಪ್ರಿಲ್ 1, 2016ರಿಂದ ತೆರಿಗೆ ದರ ಏರಿಕೆಯಾಗಲಿದೆ.

ಬಿಬಿಎಂಪಿ ನೀಡಿದ್ದ ಪ್ರಸ್ತಾವನೆಯಂತೆ ವಸತಿ ಕಟ್ಟಡಗಳಿಗೆ ಶೇ 20ರಷ್ಟು ಮತ್ತು ವಾಣಿಜ್ಯ ಕಟ್ಟೆಗಳಿಗೆ ಶೇ 25ರಷ್ಟು ತೆರಿಗೆ ಏರಿಕೆಯಾಗಲಿದೆ. 2011ರಿಂದ ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡುವ ಪ್ರಯತ್ನ ನಡೆಸಿತ್ತು. ಅಂತಿಮವಾಗಿ ಇದಕ್ಕೆ ಒಪ್ಪಿಗೆ ಸಿಕ್ಕಿದೆ. [ಆಸ್ತಿ ತೆರಿಗೆ ಆನ್ ಲೈನ್ ಮೂಲಕ ಕಟ್ಟಿ]

bbmp

ಟಿ.ಎಂ. ವಿಜಯಭಾಸ್ಕರ್‌ ಅವರು ಬಿಬಿಎಂಪಿ ಆಡಳಿತಾಧಿಕಾರಿ ಗಳಾಗಿದ್ದಾಗ ತೆರಿಗೆ ನಿರ್ಧಾರ ಮತ್ತು ಆರ್ಥಿಕ ಸ್ಥಾಯಿ ಸಮಿತಿಯ ಅಧಿಕಾರವನ್ನು ಪ್ರಯೋಗಿಸಿ, ನಗರಾಭಿವೃದ್ಧಿ ಇಲಾಖೆಗೆ ತೆರಿಗೆ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿದ್ದರು. ಇಲಾಖೆ ಇದಕ್ಕೆ ಒಪ್ಪಿಗೆ ಕೊಟ್ಟಿದೆ. [ಬೆಂಗಳೂರಿಗರಿಗೆ ತಟ್ಟಲಿದೆ ಆಸ್ತಿ ತೆರಿಗೆ ಹೆಚ್ಚಳದ ಬಿಸಿ]

ಕೆಎಂಸಿ ಕಾಯ್ದೆಯ ಪ್ರಕಾರ ಮೂರು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಶೇ 15 ರಿಂದ 30 ರಷ್ಟು ಹೆಚ್ಚಳ ಮಾಡುವುದು ಕಡ್ಡಾಯವಾಗಿದೆ.2008 ಬಳಿಕ ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಿರಲಿಲ್ಲ. ಈಗ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಬಿಬಿಎಂಪಿ ಪ್ರಸ್ತಾಪದಲ್ಲಿ ತಿಳಿಸಿತ್ತು.

ಆಸ್ತಿ ತೆರಿಗೆ ದರವನ್ನು ಹೆಚ್ಚಳ ಮಾಡುವುದರಿಂದ ಪಾಲಿಕೆಗೆ ವಾರ್ಷಿಕ 700 ಕೋಟಿಯಷ್ಟು ಹೆಚ್ಚುವರಿ ಆದಾಯ ದೊರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳು ನೀಡಿರುವ ಮಾಹಿತಿ ಅನ್ವಯ 2015ರಲ್ಲಿ ಇದುವರೆಗೂ 1,432 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ.

English summary
Bruhat Bangalore Mahanagara Palike (BBMP) set to raise property taxes by 20 percent for residential and 25 percent for commercial buildings. Urban development department approved for the proposal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X