ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಜುಲೈ 07 : ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಕಬಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ವಿರುದ್ಧ ಬಿಎಂಟಿಎಫ್ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದೆ. ಪದ್ಮನಾಭನಗರದಲ್ಲಿ ಭೂ ಕಬಳಿಕೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ.

ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಮಂಗಳವಾರ ಡಿ.ವೆಂಕಟೇಶಮೂರ್ತಿ, ವೆಂಕಟೇಶಮೂರ್ತಿ ಅವರ ಪತ್ನಿ ಕೆ.ಪ್ರಭಾ ಮತ್ತು ಕೆಲವು ಬಿಡಿಎ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ಆರಂಭಿಸಿದೆ. [ಅಧಿಕಾರಿಗಳಿಂದಲೇ ಬಿಬಿಎಂಪಿಗೆ ನಾಮ]

bmtf

ಡಿ.ವೆಂಕಟೇಶಮೂರ್ತಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಮಾಡಿ ನಿವೇಶನವನ್ನು ಕಬಳಿಕೆ ಮಾಡಿದ್ದಾರೆ ಎಂದು ಮುನಿಕೃಷ್ಣ ಎಂಬುವವರು ದೂರು ನೀಡಿದ್ದರು. ಈ ದೂರಿನ ಅನ್ವಯ ಬಿಎಂಟಿಎಫ್ ಎಫ್‌ಐಆರ್ ದಾಖಲು ಮಾಡಿಕೊಂಡಿದೆ. [ಶೆಟ್ಟರ್ ವಿರುದ್ಧ ಬಿಎಂಟಿಎಫ್ FIR]

ಎಲ್ಲಿದೆ ಭೂಮಿ? : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಪದ್ಮನಾಭನಗರದ 7ನೇ ಕ್ರಾಸ್‌ನಲ್ಲಿ ಬಿಡಿಎ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಾಗಿಟ್ಟ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ ಎಂದು ಮುನಿಕೃಷ್ಣ ಅವರು ದೂರು ನೀಡಿದ್ದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 46ನೇ ಮೇಯರ್ ಆಗಿದ್ದ ವೆಂಕಟೇಶಮೂರ್ತಿ ಅವರ ಅವಧಿ 2013ರಲ್ಲಿ ಕೊನೆಗೊಂಡಿತ್ತು. ನಂತರ ಅವರು ಶಾಂತಿನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. 34,155 ಮತಗಳನ್ನು ಪಡೆದಿದ್ದ ಅವರು ಕಾಂಗ್ರೆಸ್‌ನ ಎನ್‌.ಎ.ಹ್ಯಾರೀಸ್ ಅವರ ವಿರುದ್ಧ ಸೋಲು ಅನುಭವಿಸಿದ್ದರು.

English summary
The Bangalore Metropolitan Task Force (BMTF) on Tuesday filed an FIR against former BBMP mayor and BJP leader D.Venkatesh Murthy on land scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X