ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನ ಬಂಧನ

|
Google Oneindia Kannada News

ಬೆಂಗಳೂರು, ಜ. 24 : ಅಸ್ಸಾಂನ ನಿಷೇಧಿತ ಬೋಡೋ ಉಗ್ರ ಸಂಘಟನೆಯ ಸದಸ್ಯನೊಬ್ಬನನ್ನು ಬೆಂಗಳೂರಿನಲ್ಲಿ ಪೊಲೀಸರು ಶನಿವಾರ ಮುಂಜಾನೆ ಬಂಧಿಸಿದ್ದಾರೆ. ಶಂಕಿತ ಉಗ್ರನನ್ನು ಬಂಧಿಸಿರುವ ವಿಚಾರವನ್ನು ನಗರ ಪೊಲೀಸ್ ಆಯುಕ್ತ ಎಂ.ಎನ್‌.ರೆಡ್ಡಿ ಖಚಿತಪಡಿಸಿದ್ದಾರೆ.

ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರ ಮಾಹಿತಿ ಅನ್ವಯ ಕಾಟನ್ ಪೇಟೆಯ ಮನೆಯ ಮೇಲೆ ದಾಳಿ ನಡೆಸಿದ ನಗರ ಪೊಲೀಸರು ಅಡಗಿ ಕುಳಿತಿದ್ದ ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

terrorist

ನಿಷೇಧಿತ ಬೋಡೋ ಉಗ್ರ ಸಂಘಟನೆಯ ಸದಸ್ಯನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. [ಬೆಂಗ್ಳೂರಲ್ಲಿ ಸಿಕ್ತು ಮಣಿಪುರ ಉಗ್ರನ 1 ಕೋಟಿ ಹಣ]

ಮಣಿಪುರದ ನಿಷೇಧಿತ ಉಗ್ರಗಾಮಿ ಸಂಘಟನೆಯೊಂದು ಬೆಂಗಳೂರಿನಲ್ಲಿ ಸ್ಥಳೀಯ ಉದ್ಯಮಿಯೊಬ್ಬರ ಜತೆಗೂಡಿ ಭೂ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿರುವ ನವೆಂಬರ್ ತಿಂಗಳಿನಲ್ಲಿ ಬೆಳಕಿಗೆ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ ಉದ್ಯಮಿಯಿಂದ 1.14 ಕೋಟಿ ರೂ. ಹಣವನ್ನು ವಶಪಡಿಸಿತ್ತು.

ಅಸ್ಸಾಂ-ಮಣಿಪುರದ ಉಗ್ರಗಾಮಿ ಸಂಘಟನೆ ಪ್ರಮುಖರು, ದೇಶದ ವಿವಿಧ ರಾಜ್ಯಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿ ಅನ್ವಯ ಎನ್ಐಎ ತನಿಖೆ ನಡೆಸುತ್ತಿತ್ತು. ಇದರ ಭಾಗವಾಗಿಯೇ ಬೆಂಗಳೂರಿನಲ್ಲಿ ದಾಳಿ ಮಾಡಲಾಗಿತ್ತು.

English summary
Banned terrorist organization National Democratic Front of Bodoland member arrested in Cotton Pet Bengaluru on Saturday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X