ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ಉಪಚುನಾವಣಾ ವಿಜೇತರು

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಜಯಗಳಿಸಿದ ಕಳಲೆ ಕೇಶವ ಮೂರ್ತಿ ಮತ್ತು ಡಾ.ಗೀತಾ ಮಹದೇವಪ್ರಸಾದ್ ಇಂದು ವಿಧಾನ ಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

|
Google Oneindia Kannada News

ಬೆಂಗಳೂರು, ಏಪ್ರಿಲ್ 21: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಜಯಗಳಿಸಿದ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳಾದ ಕಳಲೆ ಕೇಶವ ಮೂರ್ತಿ ಮತ್ತು ಡಾ.ಗೀತಾ ಮಹದೇವಪ್ರಸಾದ್ ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಕಳಲೆ ಕೇಶವ ಮೂರ್ತಿ ಶ್ರೀಕಂಠೇಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವಪ್ರಸಾದ್ ಮಲೆಮಹದೇಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.[ನಂಜನಗೂಡಲ್ಲಿ ಕಾಂಗ್ರೆಸಿಗೆ ಭರ್ಜರಿ ಗೆಲುವು, ಮುಗ್ಗರಿಸಿದ ಬಿಜೆಪಿ]

Byboll winners takes oath today in Vidhan Soudha

ಪ್ರಮಾಣ ವಚನ ಸ್ವೀಕರಿಸಿದ ಇಬ್ಬರು ಶಾಸಕರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಮಂತ್ರಿ, ಶಾಸಕರು ಉಪಸ್ಥಿತರಿದ್ದರು.

ಏಪ್ರಿಲ್ 9 ರಂದು ನಡೆದಿದ್ದ ಉಪಚುನಾವಣೆಯಲ್ಲಿ, ನಂಜನಗೂಡಿನಲ್ಲಿ ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ವಿರುದ್ಧ ಕಳಲೆ ಕೇಶವಮೂರ್ತಿ ಮತ್ತು ಗುಂಡ್ಲುಪೇಟೆಯಲ್ಲಿ ಬಿಜೆಪಿಯ ನಿರಂಜನ್ ಕುಮಾರ್ ವಿರುದ್ಧ ಗೀತಾ ಮಹದೇವ ಪ್ರಸಾದ್ ಜಯಗಳಿಸಿದ್ದರು. ಚುನಾವಣೆಯ ಫಲಿತಾಂಶ ಏಪ್ರಿಲ್ 13 ರಂದು ಹೊರಬಿದ್ದಿತ್ತು.

English summary
Nanjangud and Gundlupet by poll winners of congress party, Kalale Keshava murthy and Dr. Geetha Mahadevaprasad took oath as MLAs today in Vidhan soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X