ಬೆಂಗಳೂರಿನಲ್ಲಿ ಬುಧವಾರ ಏನೇನಾಯ್ತು?

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 14 : ನಗರದ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ. ಆದರೆ, ನಗರದಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಎಸ್.ಮೇಘರಿಕ್ ಅವರು ಈ ಕುರಿತು ಬುಧವಾರ ಆದೇಶ ಹೊರಡಿಸಿದರು. ಸೋಮವಾರ ನಗರದಲ್ಲಿ ಗಲಭೆ ನಡೆದ ಬಳಿಕ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು.

police

* ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾಂಗ್ರೆಸ್ ಶಾಸಕರ ಸಭೆ ನಡೆಸುತ್ತಿದ್ದಾರೆ. ನಗರದಲ್ಲಿನ ಗಲಭೆ, ಬಿಬಿಎಂಪಿಯಲ್ಲಿನ ಮೈತ್ರಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

* ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸೋಮವಾರ ಗಲಭೆ ನಡೆದ ಲಗ್ಗೆರೆ, ಹೆಗ್ಗನಹಳ್ಳಿ, ಟಿಂಬರ್ ಯಾರ್ಡ್ ಲೇಔಟ್, ನಾಯಂಡಹಳ್ಳಿ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದ್ದದಾರೆ.

* ಕಾವೇರಿ ಜಲಾನಯನ ಪ್ರದೇಶಗಳ ವ್ಯಾಪ್ತಿಯ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಲಿದ್ದಾರೆ. ಕೋರ್ಟ್ ಆದೇಶ ಪಾಲನೆ, ರೈತರ ಹೋರಾಟ ಮುಂತಾದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಹಿಂದಿನ ಸುದ್ದಿ : ಬೆಂಗಳೂರಿನ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಸೋಮವಾರದ ಗಲಭೆ ಬಳಿಕ ಮಂಗಳವಾರ ಸ್ವಯಂ ಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಆದರೆ, ನಿಷೇಧಾಜ್ಞೆ ಜಾರಿಯಲ್ಲಿದೆ.[In Pics : ಕನ್ನಡಿಗರ ಆಕ್ರೋಶಕ್ಕೆ ಸುಟ್ಟು ಭಸ್ಮವಾದ ಬಸ್ಸು, ಲಾರಿ]

ಬುಧವಾರ ಬೆಳಗ್ಗೆ ಬಿಎಂಟಿಸಿ ಬಸ್, ಆಟೋ, ಕ್ಯಾಬ್, ನಮ್ಮ ಮೆಟ್ರೋ ಸಂಚಾರ ನಡೆಸುತ್ತಿವೆ. ಪೆಟ್ರೋಲ್ ಬಂಕ್, ಹೋಟೆಲ್ ತೆರೆದಿವೆ. ಇಂದು ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ. ಸೋಮವಾರ ಸಂಜೆ ಹೆಚ್ಚಿನ ಗಲಾಟೆ ನಡೆದ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಮುಂದುವರೆಸಲಾಗಿದೆ.[ಕಾವೇರಿ ಕಿಚ್ಚು : ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ವಿವರ]

bengaluru

ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೆಕ್ಷನ್ 144ರ ಪ್ರಕಾರ ನಿಷೇಧಾಜ್ಞೆ ಜಾರಿಯಲ್ಲಿದೆ.[ಕಾವೇರಿ ಕಿಚ್ಚು : ಬೆಂಗಳೂರಲ್ಲಿ 312 ಮಂದಿ ಬಂಧನ]

ನಗರದ ಸೂಕ್ಷ್ಮ ಪ್ರದೇಶಗಳಲ್ಲಿ 15,000 ಸಾವಿರ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Cauvery protest turned into violent in Bengaluru on September 12, 2016. Now situation under control, Curfew imposed in 16 police station limits.
Please Wait while comments are loading...