ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಭಾಗ್ಯ

|
Google Oneindia Kannada News

ಬೆಂಗಳೂರು, ಅಕ್ಟೋಬರ್, 14: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಪ್ರಸ್ತುತ ನೀಡುತ್ತಿರುವ ಸ್ಕರ್ಟ್ ಬದಲಿಗೆ ಚೂಡಿದಾರ್ ಮಾದರಿಯಲ್ಲಿ ಸಮವಸ್ತ್ರ ವಿತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಶುಕ್ರವಾರ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು. ಸಮವಸ್ತ್ರ, ಸೈಕಲ್ ಮತ್ತು ಶೂ ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು.

ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಭಾಗ್ಯ

ಮುಂದಿನ ವರ್ಷ ವಿತರಣೆ ಮಡಬೇಕಾಗಿರುವ ಸಮವಸ್ತ್ರ, ಸೈಕಲ್ ಮತ್ತು ಶೂ ಖರೀದಿಗೆ ಈಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಅವರು ಮುಖ್ಯಮಂತ್ರಿಯವರು ಆದೇಶ ನೀಡಿದ್ದಾರೆ ಎಂದು ಅವರು ಹೇಳಿದರು.

ಪ್ರತಿ ವರ್ಷ ಜೂನ್ ಅಂತ್ಯದ ವೇಳೆಗೆ ವಿದ್ಯಾರ್ಥಿಗಳಿಗೆ ಸೈಕಲ್ ಮತ್ತು ಶೂಗಳನ್ನು ವಿತರಿಸುವುದು ಸೂಕ್ತ, ಇದರಲ್ಲಿ ವಿಳಂಬ ಮಾಡುವುದು ಬೇಡ ಎಂದು ಅವರು ಹೇಳಿದರು.

8,9 ಮತ್ತು 10ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಚೂಡಿದಾರ್ ಸಮವಸ್ತ್ರ ಕಡ್ಡಾಯಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸಂಸದೀಯ ಕಾರ್ಯದರ್ಶಿ ಗೋವಿಂದರಾಜ್, ಮತ್ತಿರರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

English summary
The state government decided to provide 'choodidar' for 8th 9th and 10th class girl students from next academic year onwards.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X