ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನೊಂದು ತಿಂಗಳಲ್ಲಿ ಕೆಪಿಸಿಸಿಗೆ ಹೊಸ ಸಾರಥಿ ಸುಳಿವು ನೀಡಿದ ಸಿದ್ದರಾಮಯ್ಯ

By ಒನ್ಇಂಡಿಯಾ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಮೇ 22: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಹೊಸ ಸಾರಥಿ ಆಯ್ಕೆಯಾಗುವ ಸೂಚನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದ ನಂತರ ಸಿದ್ದರಾಮಯ್ಯ ಈ ಸುಳಿವನ್ನು ನೀಡಿದ್ದಾರೆ.

ಮಾಧ್ಯಮದವರ ಜತೆಗೆ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಒಂದು ತಿಂಗಳ ಒಳಗಾಗಿ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಆಗಲಿದೆ. ಈ ವಿಚಾರವಾಗಿ ಹೈ ಕಮಾಂಡ್ ತೀರ್ಮಾನವನ್ನು ಮಾಡಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಯಡಿಯೂರಪ್ಪ್ ಅವರ ರಾಜ್ಯಪ್ರವಾಸದ ಬಗ್ಗೆ ಮಾತನಾಡಿದ ಅವರು, ಇದರ ಬದಲು ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಿಕೊಂಡು ಬರಲಿ ಎಂದಿದ್ದಾರೆ.[ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸದ್ಯಕ್ಕೆ ಊಹಾಪೋಹ ಸುದ್ದಿ : ಖರ್ಗೆ]

CM Siddaramaiah hints new KPCC president appointment within a month

ಇನ್ನು ಕೆಪಿಸಿ ಅಧ್ಯಕ್ಷ-ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ವಿಚಾರವನ್ನು ಬಿಜೆಪಿಯು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ಆಹಾರ ಇಲಾಖೆಯಲ್ಲಿ ಹಗರಣ ನಡೆದಿದ್ದೇ ಆದರೆ ಯಾರನ್ನೂ ರಕ್ಷಣೆ ಮಾಡಿಕೊಳ್ಳುವ ಉದ್ದೇಶವಿಲ್ಲ. ಯಾವುದೇ ರೀತಿ ತನಿಖೆಗೆ ಸಹಕಾರ ನೀಡಲು ಸಿದ್ಧ ಎಂದು ಹೇಳಿದ್ದಾರೆ.[ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ತೇಲಿ ಬಂತು]

ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿಗೆ ತಿರುಗೇಟು ನೀಡಿದ್ದು, ಬಿಜೆಪಿಯು ಕಾಂಗ್ರೆಸ್ ಮುಕ್ತ ದೇಶ ಮಾಡುವುದಾಗಿ ಹೇಳುತ್ತಿದೆ. ಕಾಂಗ್ರೆಸ್ ಅನ್ನು ಮರಳಿ ಅಧಿಕಾರಕ್ಕೆ ತರುವ ಕೆಲಸ ಕರ್ನಾಟಕದಿಂದಲೇ ಶುರುವಾಗಲಿ ಎಂದು ಹೇಳಿದ್ದಾರೆ.

{promotion-urls}

English summary
Chief minister Siddaramaiah hints new KPCC president appointment within a month. He spoke to media in Bengaluru after Rajiv Gandhi Death anniversary function.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X