ಪ್ರಚೋದನಕಾರಿ ಹೇಳಿಕೆ: ಯಡಿಯೂರಪ್ಪ ವಿರುದ್ಧ ದೂರು ದಾಖಲು

Posted By:
Subscribe to Oneindia Kannada

ಬೆಂಗಳೂರು, ಜುಲೈ 16 : ಕರಾವಳಿಯಲ್ಲಿ ನಡೆಯುತ್ತಿದ್ದ ಕೋಮು ಉದ್ವಿಗ್ನತೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹನುಮೆಗೌಡ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಕಾಮಾಕ್ಷಿಪಾಳ್ಯದ ಹನುಮೆಗೌಡ ಎಂಬವರು ಶನಿವಾರ ದೂರು ನೀಡಿದ್ದು, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಪೊಲೀಸರು ಬಂಧಿಸಿದರೆ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಯಡಿಯೂರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದು. ಯಡಿಯೂರಪ್ಪನವರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕಾನೂನುಕ್ರಮ ತೆಗೆದುಕೊಳ್ಳಬೇಕು ಎಂದು ಹನುಮೆಗೌಡ ದೂರಿನಲ್ಲಿ ತಿಳಿಸಿದ್ದಾರೆ.

ಸಿಎಂಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಯೋಗ್ಯತೆ ಇಲ್ಲ - ಬಿಎಸ್‌ವೈ ವಾಗ್ದಾಳಿ

Complaint filed against BS Yeddyurappa for provocative speech

ಹತ್ಯೆಯಾದ ಬಂಟ್ವಾಳದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ್ ಅವರ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಭಾಕರ್ ಭಟ್ ಅವರನ್ನು ಪೊಲೀಸರು ಬಂಧಿಸಿದರೆ ರಾಜ್ಯವೇ ಬೆಂಕಿ ಹೊತ್ತಿ ಉರಿಯುತ್ತದೆ ಎಂದು ಬಿಎಸ್ ವೈ ಗುಡುಗಿದ್ದರು.

B S Yeddyurappa mistakenly says "BJP mission 110 instead of 150" | Oneindia Kannada
English summary
A complaint has been lodged at the Vidhana Soudha police station against BJP state president B S Yeddyurappa for promoting enmity and making provocative speeches.
Please Wait while comments are loading...