ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ : ಸುಪ್ರೀಂ

|
Google Oneindia Kannada News

ಬೆಂಗಳೂರು, ಮೇ 5 : ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ. ಮೂರು ತಿಂಗಳಿನಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ರದ್ದುಗೊಳಿಸಿದೆ.

ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ಅವರ ನೇತೃತ್ವದ ಪೀಠ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. [ಏಕಸದಸ್ಯ ಪೀಠದ ಆದೇಶ ರದ್ದು]

Supreme Court

ಹೈಕೋರ್ಟ್ ತೀರ್ಪು ರಾಜ್ಯ ಸರ್ಕಾರಕ್ಕೆ ಸಮಾಧಾನ ತಂದಿತ್ತು. ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಈಗ ಸುಪ್ರೀಂಕೋರ್ಟ್ ಮೂರು ತಿಂಗಳಿನಲ್ಲಿ ಚುನಾವಣೆ ನಡೆಸುವಂತೆ ಆದೇಶ ನೀಡಿರುವುದರಿಂದ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ. [ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ]

ಚುನಾವಣೆ ವಿವಾದದ ವಿವರ : ಬಿಜೆಪಿಯ ಬಿಬಿಎಂಪಿ ಸದಸ್ಯ­ರಾದ ಸಿ.ಕೆ.ರಾಮಮೂರ್ತಿ ಮತ್ತು ಬಿ.ಸೋಮಶೇಖರ್‌ ಮುಂತಾದವರು ಬಿಬಿಎಂಪಿ ವಿಭಜನೆ ಪ್ರಸ್ತಾಪ ಮುಂದಿಟ್ಟುಕೊಂಡು ಚುನಾವಣೆಯನ್ನು ಮುಂದೂಡಲು ಸರ್ಕಾರ ಪ್ರಯತ್ನ ನಡೆಸುತ್ತಿದೆ, ಸಕಾಲದಲ್ಲಿ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. [ಬಿಬಿಎಂಪಿ ವಿಭಜನೆ ಹೇಗೆ, ಇಲ್ಲಿದೆ ಮಾಹಿತಿ]

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮೇ.30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಪಾಲಿಕೆ ವಿಭಜನೆ ಮಾಡಿ ನಂತರ ಚುನಾವಣೆ ನಡೆಸುವ ಚಿಂತನೆಯಲ್ಲಿದ್ದ ಸರ್ಕಾರ ಈ ಆದೇಶವನ್ನು ಪ್ರಶ್ನಿಸಿ ವಿಭಾಗೀಯಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತ್ತು.

ಏ.24ರಂದು ಈ ಕುರಿತು ತೀರ್ಪು ನೀಡಿದ್ದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ರಾಮ್ ಮೋಹನ್ ರೆಡ್ಡಿ ಅವರ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿತ್ತು. ಸರ್ಕಾರ ನೀಡಿದ ಮೀಸಲಾತಿ ಪಟ್ಟಿಯಂತೆ ಚುನಾವಣೆ ನಡೆಸಲು ನಾವು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮುಂದೆ ವಾದ ಮಂಡನೆ ಮಾಡಿತ್ತು.

ಆದರೆ, ಏಕಸದಸ್ಯ ಪೀಠದ ಆದೇಶ ರದ್ದಾಗಿದ್ದರಿಂದ ಚುನಾವಣೆ ಆರು ತಿಂಗಳ ಕಾಲ ಮುಂದೂಡಲಾಗಿತ್ತು. ಆದ್ದರಿಂದ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ 3 ತಿಂಗಳಿನಲ್ಲಿ ಚುನಾವಣೆ ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.

English summary
Karnataka government must conduct Bruhat Bengaluru Mahanagara Palike (BBMP) election within three months supreme court ordered on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X