ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮ ಆಸ್ತಿಗಳಿಕೆ : ಶಾಂತ ಕುಮಾರಿ ವಿರುದ್ಧ ಚಾರ್ಜ್ ಶೀಟ್

|
Google Oneindia Kannada News

ಬೆಂಗಳೂರು, ಮೇ 21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಎನ್.ಶಾಂತಕುಮಾರಿ ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

2012ರಲ್ಲಿ ಲೋಕಾಯುಕ್ತ ಪೊಲೀಸರು ಶಾಂತ ಕುಮಾರಿ ಅವರ ಮನೆಯ ಮೇಲೆ ದಾಳಿ ನಡೆಸಿ ಹಣ ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದರು. ಅವುಗಳ ಮೌಲ್ಯಗಳನ್ನು ಲೆಕ್ಕಹಾಕಿದಾಗ ಶೇ 45ರಷ್ಟು ಸಂಪತ್ತಿಗೆ ದಾಖಲೆ ಇಲ್ಲದಿರುವುದು ಬೆಳಕಿಗೆ ಬಂದಿದೆ. [ಶಾಂತಕುಮಾರಿ ಸಂದರ್ಶನ]

N. Shantha Kumari

ಈ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತರು 5000 ಪುಟಗಳ ಚಾರ್ಜ್ ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಸದ್ಯ, ಶಾಂತ ಕುಮಾರಿ ಅವರು ಮಾಜಿ ಮೇಯರ್ ಆಗಿರುವುದರಿಂದ ಸರ್ಕಾರದ ಅನುಮತಿ ಪಡೆಯದೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. [ಕರ್ನಾಟಕದಲ್ಲಿ ಅಕ್ರಮ ಆಸ್ತಿಗಳಿಕೆ ಆರೋಪ ಯಾರ ಮೇಲಿದೆ?]

ಮನೆಯಲ್ಲಿ ಏನು ಸಿಕ್ಕಿತ್ತು? : ಎನ್.ಶಾಂತಕುಮಾರಿ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿದಾಗ 1.29 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಇದರಲ್ಲಿ 17 ಲಕ್ಷ ರೂ. ಮೌಲ್ಯದ750 ಗ್ರಾಂ ಚಿನ್ನ, 1.59 ಲಕ್ಷ ರೂ. ಮೌಲ್ಯದ 3 ಕೆಜಿ ಬೆಳ್ಳಿ ಮತ್ತು 20 ಲಕ್ಷ ಹಣ ಸೇರಿತ್ತು. ದೊಡ್ಡಬಳ್ಳಾಪುರದಲ್ಲಿನ ಭೂಮಿಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ದಾಳಿ ನಡೆದ ಸಂದರ್ಭದಲ್ಲಿ ತಾವು ಅಕ್ರಮ ಆಸ್ತಿಗಳಿಕೆ ಮಾಡಿಲ್ಲ ಎಂದು ಶಾಂತಕುಮಾರಿ ಅವರು ಆರೋಪವನ್ನು ತಳ್ಳಿ ಹಾಕಿದ್ದರು. ಸದ್ಯ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಲೋಕಾಯುಕ್ತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

English summary
Lokayukta police probing a disproportionate assets (DA) case against Bruhat Bangalore Mahanagara Palike (BBMP)former mayor N. Shantha Kumari is set to file a charge-sheet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X