ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಸಚಿವರು ಬೇಕಿಲ್ಲ : ರೆಡ್ಡಿ

|
Google Oneindia Kannada News

ಬೆಂಗಳೂರು, ಆ.28 : 'ಬೆಂಗಳೂರಿನ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವ ಅಗತ್ಯವಿಲ್ಲ. ಖಾತೆ ಮುಖ್ಯಮಂತ್ರಿಗಳ ಬಳಿಯೇ ಇರಲಿ' ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಮಲಿಂಗಾ ರೆಡ್ಡಿ ಅವರು, 'ಬೆಂಗಳೂರಿನ ಅಭಿವೃದ್ಧಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡಿದರೆ ಹೆಚ್ಚಿನ ಲಾಭವಾಗುವುದಿಲ್ಲ. ಮುಖ್ಯಮಂತ್ರಿಗಳ ಬಳಿಯೇ ಖಾತೆ ಇದ್ದರೆ ಉಪಯೋಗವಾಗಲಿದೆ' ಎಂದು ಹೇಳಿದರು. [ಬೆಂಗಳೂರಿನ ಅಭಿವೃದ್ಧಿಗೆ ಪ್ರತ್ಯೇಕ ಸಚಿವರು : ಸಿಎಂ]

ramalinga reddy

'ಬಿಬಿಎಂಪಿ ಮುಖ್ಯಮಂತ್ರಿಗಳ ವ್ಯಾಪ್ತಿಗೆ ಬರುತ್ತದೆ. ನಗರದ ಸಮಗ್ರ ಅಭಿವೃದ್ಧಿ ಬಗ್ಗೆ ಗಮನಹರಿಸಲು ಸಾಧ್ಯವಿಲ್ಲ ಎಂದು ಅವರು ಪ್ರತ್ಯೇಕ ಸಚಿವರನ್ನು ನೇಮಿಸಲು ಮುಂದಾಗಿದ್ದಾರೆ. ಆದರೆ, ಹಣಕಾಸು ಖಾತೆ ಮುಖ್ಯಮಂತ್ರಿಗಳ ಬಳಿ ಇರುವುದರಿಂದ ಬೆಂಗಳೂರು ನಗರ ಖಾತೆಯೂ ಅವರ ಬಳಿ ಇರುವುದೇ ಉತ್ತಮ' ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. [ಬಿಬಿಎಂಪಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಆಡಳಿತ?]

ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ : ಬಿಬಿಎಂಪಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗಲೇ ಬೆಂಗಳೂರಿನ ಅಭಿವೃದ್ಧಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

'ಬೆಂಗಳೂರು ನಗರ ಎಂಬ ಸ್ವತಂತ್ರ ಖಾತೆಯನ್ನು ರಚನೆ ಮಾಡಿ, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಫಲಿತಾಂಶ ಏನೇ ಬಂದರೂ ಪ್ರತ್ಯೇಕ ಸಚಿವ ಸ್ಥಾನ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

English summary
Bengaluru district in-charge minister Ramalinga Reddy said, CM Siddaramaiah holds the finance portfolio. There is no need for a separate minister for Bengaluru development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X