ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೇವಣ್ಣ ಸಮರ್ಥ ಆದರೆ, ಸಿಎಂ ಅಭ್ಯರ್ಥಿಯಲ್ಲ: ದೇವೇಗೌಡ

ರೇವಣ್ಣಗೆ ಹೆಚ್ಚಿನ ಉತ್ಸಾಹವಿದೆ. ಆದರೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿ ಪಕ್ಷವನ್ನು ಬೆಳೆಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 28: ರೇವಣ್ಣಗೆ ಹೆಚ್ಚಿನ ಉತ್ಸಾಹವಿದೆ. ಆದರೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿ ಪಕ್ಷವನ್ನು ಬೆಳೆಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಭ್ಯರ್ಥಿಗಳ ಆಯ್ಕೆಯನ್ನು ಕುಮಾರಸ್ವಾಮಿ ಅವರ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ 224 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳೇ ಸ್ಪರ್ಧಿಸಲಿದ್ದಾರೆ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದರು.

HD Deve Gowda supports HD Revanna but says he is not CM Candidate from JDS

ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ಕಾಂಗ್ರೆಸ್ ಜೊತೆಗೆ ನಾವು ಒಳ ಒಪ್ಪಂದ ಮಾಡಿಕೊಂಡಿದ್ದೇವೆ ಎನ್ನಲಾಗಿತ್ತು. ಆದರೆ ನಾವು ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಆರ್ಥಿಕ ಸಂಕಷ್ಟದಿಂದ ಜೆಡಿಸ್ ಸ್ಪರ್ಧಿಸಲಿಲ್ಲ ಎಂದರು.

ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವಿನ ಕಿತ್ತಾಟದ ಲಾಭ ಪಡೆಯಲು ನಾವು ಹವಣಿಸುತ್ತಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗಿದ್ದೇವೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು. ರಾಷ್ಟ್ರೀಯ ಪಕ್ಷಗಳು ದೊಡ್ಡ ಸಮುದ್ರವಿದ್ದಂತೆ ಇಲ್ಲಿ ಯಾರು ತೇಲುತ್ತಾರೆ, ಯಾರು ಮುಳುಗುತ್ತಾರೆ ತಿಳಿಯುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಸಂಘಟನೆಯ ಹೋರಾಟದ ಮೂಲಕ ಪಕ್ಷ ಕಟ್ಟುತ್ತೇವೆ. ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಒಳ್ಳೆಯ ಸಂಬಂಧವಿದೆ. ಯಜಮಾನನಾಗಿ ನಾನು ತೀರ್ಮಾನ ಮಾಡುತ್ತೇನೆ. ನನ್ನ ಕುಟುಂಬ ಒಡೆಯುವುದಿಲ್ಲ. ಉತ್ತರಪ್ರದೇಶದ ಮುಲಾಯಂ ಸಿಂಗ್ ಯಾದವ್ ಅವರ ಮನೆಯಂತಾಗಲು ಬಿಡುವುದಿಲ್ಲ ಎಂದು ಹೇಳಿದರು.

English summary
There is no conflict of confusion in our family, HD Revanna is capable for MLA post he can n't become CM candidate, List of candidates will be decided after meeting with HD Kumaraswamy said JDS supremo HD Deve Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X