ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ ಉಸ್ತುವಾರಿ, ಶಾಸಕ ಜಮೀರ್‌ಗೆ ಸ್ಥಾನವಿಲ್ಲ

|
Google Oneindia Kannada News

ಬೆಂಗಳೂರು, ಫೆಬ್ರವರಿ 03 : ಹೆಬ್ಬಾಳ ಉಪ ಚುನಾವಣೆಗೆ ನಾಲ್ವರು ಸದಸ್ಯರ ಉಸ್ತುವಾರಿ ಸಮಿತಿಯನ್ನು ಜೆಡಿಎಸ್ ನೇಮಕ ಮಾಡಿದೆ. ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸಮಿತಿಯಲ್ಲಿ ಸ್ಥಾನ ನೀಡಿಲ್ಲ.

ಜೆಡಿಎಸ್ ಕಾರ್ಯಾಧ್ಯಕ್ಷ ಎ.ಎಸ್.ನಾರಾಯಣ ರಾವ್ ಅವರು ಮಂಗಳವಾರ 4 ಸದಸ್ಯರನ್ನು ಒಳಗೊಂಡ ಉಸ್ತುವಾರಿ ಸಮಿತಿಯನ್ನು ರಚನೆ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಮತ್ತು ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಮುಖಂಡರಾದ ಹನುಮಂತೇಗೌಡ ಮತ್ತು ರುದ್ರಪ್ಪ ಅವರು ಸಮಿತಿಯಲ್ಲಿದ್ದಾರೆ. ['ಜಮೀರ್ ಹೇಳಿದರೆ ಮಾತ್ರ ಹೆಬ್ಬಾಳದಲ್ಲಿ ಸ್ಪರ್ಧೆ']

zameer ahmed khan

ಮಂಗಳವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅಸಮಾಧಾನ ಹೊರಹಾಕಿದ ಕೆಲವೇ ಕ್ಷಣಗಳಲ್ಲಿ ಈ ಪಟ್ಟಿ ಬಿಡುಗಡೆಯಾಗಿದ್ದು, ಜಮೀರ್ ಅಹಮದ್ ಖಾನ್ ಅವರಿಗೆ ಸಮಿತಿಯಲ್ಲಿ ಯಾವುದೇ ಸ್ಥಾನ ನೀಡಿಲ್ಲ. [ಜಮೀರ್ ಬಗ್ಗೆ ಗೌಡರು ಹೇಳಿದ್ದೇನು?]

'ಹೆಬ್ಬಾಳ ಉಪ ಚುನಾವಣೆಯಲ್ಲಿ ಜಮೀರ್ ಅಹಮದ್ ಖಾನ್ ಅವರು ಹೇಳಿದ ಅಭ್ಯರ್ಥಿಗೆ ಟಿಕೆಟ್ ನೀಡುವುದಾಗಿ' ದೇವೇಗೌಡರು ಕೆಲವು ದಿನಗಳ ಹಿಂದೆ ಹೇಳಿದ್ದರು. ನಂತರ ಜಮೀರ್ ಮತ್ತು ಪಕ್ಷದ ನಾಯಕರ ನಡುವೆ ಅಸಮಾಧಾನ ಉಂಟಾಗಿತ್ತು. ದೇವೇಗೌಡರು ಮಂಗಳವಾರ ಬಹಿರಂಗವಾಗಿ ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

'ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಜಮೀರ್ ಅವರಿಗೆ ನೈತಿಕವಾಗಿ ಕಷ್ಟವಾಗುತ್ತಿದೆ' ಎಂದು ಹೇಳಿದ್ದ ದೇವೇಗೌಡರು, 'ಜಮೀರ್ ಅಹಮದ್ ಖಾನ್ ಮತ್ತು ಅವರ ಬೆಂಬಲಿಗರು ಪಕ್ಷವನ್ನು ಬಿಟ್ಟು ಹೋದರು ಜೆಡಿಎಸ್ ಪಕ್ಷ ಉಳಿಯುತ್ತದೆ' ಎಂದು ಖಡಕ್‌ ಆಗಿ ಪ್ರತಿಕ್ರಿಯೆ ನೀಡಿದ್ದರು.

ಶಾಸಕ ಜಗದೀಶ್ ಕುಮಾರ್ (ಬಿಜೆಪಿ) ನಿಧನದಿಂದ ತೆರವಾದ ಹೆಬ್ಬಾಳ ಕ್ಷೇತ್ರದಲ್ಲಿ ಫೆ.13ರಂದು ಉಪ ಚುನಾವಣೆ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಾಂಗ್ರೆಸ್‌ನಿಂದ ರೆಹಮಾನ್‌ ಷರೀಫ್‌, ಬಿಜೆಪಿಯಿಂದ ವೈ.ನಾರಾಯಣ ಸ್ವಾಮಿ ಮತ್ತು ಜೆಡಿಎಸ್‌ನಿಂದ ಇಸ್ಮಾಯಿಲ್‌ ಷರೀಫ್‌ ಅವರು ಅಭ್ಯರ್ಥಿಗಳಾಗಿದ್ದಾರೆ.

English summary
Karnataka JDS has appointed four member observers team for Hebbal by election scheduled on February 13, 2016. Party not recognized Chamarajpet MLA Zameer Ahmed Khan name for observer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X