ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ?
ಬೆಂಗಳೂರು, ಏಪ್ರಿಲ್ 01 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಿದ್ದು, ಷರಿಷ್ಕೃತ ತೆರಿಗೆ ದರ ಶುಕ್ರವಾರದಿಂದ ಜಾರಿಗೆ ಬರಲಿದೆ. ವಸತಿ ಪ್ರದೇಶಗಳಿಗೆ ಶೇ 20 ಮತ್ತು ವಸತಿಯೇತರ ಪ್ರದೇಶಗಳಿಗೆ ಶೇ 25ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ.
ಆಸ್ತಿ ತೆರಿಗೆ ಪಾವತಿ ಮಾಡುವ ವಿಚಾರದಲ್ಲಿ ಗೊಂದಲಗಳಿದ್ದರೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿಯನ್ನು ಆರಂಭಿಸಿದೆ. 22660000 ದೂರವಾಣಿ ಸಂಖ್ಯೆಗೆ ಕರೆ ಮಾಡಿದರೆ, ಕಂದಾಯ ವಿಭಾಗದ ಅಧಿಕಾರಿಗಳು ಕರೆ ಸ್ವೀಕರಿಸಿ ಗೊಂದಲ ಬಗೆಹರಿಸುತ್ತಾರೆ. [ಬೆಂಗಳೂರಿಗರೇ ಗಮನಿಸಿ: ಏಪ್ರಿಲ್ 01 ರಿಂದ ಆಸ್ತಿ ತೆರಿಗೆ ಹೆಚ್ಚಳ]

ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ? : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಪಾವತಿಗೆ 2 ರೀತಿಯ ಸೌಲಭ್ಯವನ್ನು ನೀಡಿದೆ. ಆನ್‌ಲೈನ್ ಮೂಲಕ ತೆರಿಗೆ ಪಾವತಿ ಮಾಡಬಹುದು. ಕೆನರಾ ಬ್ಯಾಂಕ್ ಶಾಖೆಗಳಲ್ಲಿಯೂ ತೆರಿಗೆ ಪಾವತಿ ಮಾಡಬಹುದಾಗಿದೆ. [ಆನ್ ಲೈನ್ ಮೂಲಕ ತೆರಿಗೆ ಕಟ್ಟುವುದು ಹೇಗೆ?]
ಬಿಬಿಎಂಪಿಯ ಯಾವುದೇ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವಂತಿಲ್ಲ. ಬೆಂಗಳೂರು ಒನ್ ಕೇಂದ್ರದಲ್ಲಿ ತೆರಿಗೆ ಪಾವತಿ ಮಾಡುವ ವ್ಯವಸ್ಥೆಯನ್ನು ಪಾಲಿಕೆ ಇನ್ನೂ ಒದಗಿಸಿಲ್ಲ. ಆನ್‌ಲೈನ್ ಮೂಲಕ ಪಾವತಿ ಮಾಡಲು ಸಾಧ್ಯವಾಗದಿದ್ದರೆ, ಕೆನರಾ ಬ್ಯಾಂಕ್ ಶಾಖೆಯಲ್ಲಿ ನಗದು, ಡಿ.ಡಿ ಅಥವಾ ಪೇ-ಆರ್ಡರ್ ಮೂಲಕ ತೆರಿಗೆ ಪಾವತಿ ಮಾಡಬಹುದಾಗಿದೆ.
ತೆರಿಗೆ ಪಾವತಿ ಮಾಡಲು ಜನರು ಅರ್ಜಿ ನಮೂನೆ ಮತ್ತು ಚಲನ್‌ಗಳನ್ನು ಆನ್‌ಲೈನ್‌ನಲ್ಲಿಯೇ ಪಡೆದುಕೊಳ್ಳಬೇಕು. bbmp.gov.in ಅಥವಾ bbmptax.karnataka.gov.in ವೆಬ್‌ಸೈಟ್‌ನಲ್ಲಿ ತೆರಿಗೆ ಪಾವತಿ ಮಾಡುವ ಬಗ್ಗೆ ಮಾಹಿತಿ ಇದೆ.
ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ತೆರಿಗೆ ಪಾವತಿ ವಿಭಾಗದಲ್ಲಿ ಪಿಐಡಿ ಸಂಖ್ಯೆ ನೋಂದಣಿ ಮಾಡಿದರೆ. ಕಳೆದ ಬಾರಿ ತುಂಬಿದ ಕಟ್ಟಿದ ಮಾಹಿತಿ ಸಿಗುತ್ತದೆ. ಸ್ವತ್ತಿನಲ್ಲಿ ಏನಾದರೂ ಬದಲಾವಣೆ ಮಾಡಲಾಗಿದ್ದರೆ ಪರಿಷ್ಕರಣೆಗೂ ಅವಕಾಶ ನೀಡಲಾಗಿದೆ.
ನೆಟ್ ಬ್ಯಾಂಕಿಂಗ್ ಸೌಲಭ್ಯವಿದೆ : ಆನ್‌ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಲು ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ನೀಡಲಾಗಿದೆ. ಯಾವುದೇ ಬ್ಯಾಂಕಿನ ಮಾಸ್ಟರ್ ಹಾಗೂ ವೀಸಾ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಮೂಲಕವೂ ಪಾವತಿಗೆ ಅವಕಾಶ ನೀಡಲಾಗಿದೆ. ಇದಕ್ಕೆ ಪ್ರತ್ಯೇಕ ಸೇವಾ ಶುಲ್ಕವಿರುವುದಿಲ್ಲ.
ಜನರು ಆನ್‌ಲೈನ್ ಮೂಲಕ ಚಲನ್ ಡೌನ್‌ಲೋಡ್ ಮಾಡಿಕೊಂಡು, ಕೆನರಾ ಬ್ಯಾಂಕ್‌ನ ಬೆಂಗಳೂರು ನಗರದ 175 ಶಾಖೆಗಳಲ್ಲಿ ಎಲ್ಲಿ ಬೇಕಾದರೂ ಪಾವತಿ ಮಾಡಬಹುದು. ಚೆಕ್ ಮೂಲಕ ತೆರಿಗೆ ಕಟ್ಟಿದರೆ, ನಗದೀಕರಣದ ಬಳಿಕ ರಶೀದಿ ದೊರೆಯುತ್ತದೆ.
ಕಚೇರಿಗಳಿಗೆ ಭೇಟಿ : ಮನೆಯಲ್ಲಿ ಇಂಟರ್‌ನೆಟ್ ಸೌಲಭ್ಯ ಇಲ್ಲದಿದ್ದರೆ ಸಮೀಪದ ಬಿಬಿಎಂಪಿ ಸಹಾಯ ಕೇಂದ್ರ, ನಾಗರಿಕ ಸೇವಾ ಕೇಂದ್ರ ಅಥವ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿ ನೆರವಿನೊಂದಿಗೆ ಆನ್‌ಲೈನ್ ನಮೂನೆ ಪಡೆದು, ಚಲನ್ ಪಡೆದುಕೊಂಡು ಬ್ಯಾಂಕ್‌ನಲ್ಲಿ ತೆರಿಗೆ ಪಾವತಿ ಮಾಡಬಹುದು.
ಏ.4ರಿಂದ ಪಾವತಿ ಮಾಡಬೇಕು : ಆಸ್ತಿ ತೆರಿಗೆಯನ್ನು ಏಪ್ರಿಲ್‌ನಲ್ಲಿಯೇ ಪಾವತಿ ಮಾಡಿದರೆ ಶೇ 5ರಷ್ಟು ರಿಯಾಯಿತಿ ದೊರೆಯುತ್ತದೆ. ಮೇ 30ರ ಬಳಿಕ ತೆರಿಗೆ ಪಾವತಿಸಿದರೆ ಶೇ 2ರಷ್ಟು ಬಡ್ಡಿ ಕಟ್ಟಬೇಕು. ಏ.4ರಿಂದ ಬ್ಯಾಂಕ್‌ಗಳಲ್ಲಿ ತೆರಿಗೆ ಕಟ್ಟಬಹುದಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications