ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗರೇ, ಪ್ಲಾಸ್ಟಿಕ್ ಕವರ್ ಕೊಂಡೊಯ್ದರೂ ದಂಡ ಕಟ್ಬೇಕು!

|
Google Oneindia Kannada News

ಬೆಂಗಳೂರು, ಮೇ 10: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕೊಂಡೊಯ್ದರೂ ದಂಡ ನೀಡಬೇಕಾಗುತ್ತದೆ. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಬಿಬಿಎಂಪಿ ಕಠಿಣ ಕ್ರಮಕ್ಕೆ ಮುಂದಾಗಿದೆ.

ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ಲಾಸ್ಟಿಕ್ ನಿಷೇಧ ಮಾಡಿ ಆದೇಶ ಹೊರಡಿಸಿದ್ದರೂ ಕಟ್ಟುನಿಟ್ಟಿನ ಜಾರಿ ಸಾಧ್ಯವಾಗಿರಲಿಲ್ಲ. ತರಕಾರಿ ಮತ್ತಿತರ ವಸ್ತುಗಳನ್ನು ಖರೀದಿಸಲು ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಕೊಂಡೊಯ್ಯುವ ಜನರಿಗೂ 500 ರೂ. ದಂಡ ವಿಧಿಸಲು ಬಿಬಿಎಂಪಿ ತೀರ್ಮಾನಿಸಿದೆ. ಇನ್ನೊಮ್ಮೆ ಸಿಕ್ಕಿಹಾಕಿಕೊಂಡರೆ ಸಾವಿರ ರು. ದಂಡ ಕಟ್ಟಲೇಬೇಕು.[ಕೆ ಆರ್ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ನಿಷೇಧ]

plastic

ಅಂಗಡಿ ಮಾಲೀಕರು, ಚಿಲ್ಲರೆ ವ್ಯಾಪಾರಿಗಳು, ಮಾರಾಟಗಾರರು, ಹಾಗೂ ಸಗಟು ಮಾರಾಟಗಾರರು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಕಳೆದ ಮಾರ್ಚ್‌ ನಲ್ಲಿಯೇ ತಿಳಿಸಿತ್ತು.[ಪ್ಲಾಸ್ಟಿಕ್ ನಿಷೇಧ ಅಧಿಕೃತ, ನಿಯಮ ಮುರಿದರೆ ಜೈಲೂಟ]

ನಿಯಮ ಉಲ್ಲಂಘನೆ ಮಾಡಿದರೆ ಪರಿಸರ ಸಂರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬಹುದು. 5 ಸಾವಿರದಿಂದ 1 ಒಂದು ಲಕ್ಷದವರೆಗೂ ದಂಡ ಮತ್ತು 3 ರಿಂದ 6 ತಿಂಗಳವರೆಗೂ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಕಟ್ಟುನಿಟ್ಟಾಗಿ ತಿಳಿಸಲಾಗಿತ್ತು.

ಕಸ ಸಮಸ್ಯೆ ನಿರ್ವಹಣೆಗೂ ಪ್ಲಾಸ್ಟಿಕ್ ಮುಕ್ತ ಪರಿಸರ ಕಾರಣವಾಗಲಿದೆ. ಅಂಗಡಿಗಳಲ್ಲಿ 40 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ನಿಷೇಧ ಮಾಡಿದ್ದರೂ ಕಟ್ಟುನಿಟ್ಟಿನ ಜಾರಿ ಸಾಧ್ಯವಾಗದ ಕಾರಣ ಜನರಿಗೂ ದಂಡ ಹಾಕಲು ಬಿಬಿಎಂಪಿ ಮುಂದಾಗಿದೆ.

English summary
This is the very important news for all Bengaluru citizens. The Bruhat Bengaluru Mahanagara Palike (BBMP) has started fining people who use plastic Rs 500 and repeat offenders can expect to be relieved of Rs 1,000.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X