ಡಿ.24ರಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 22: ಕನ್ನಡ ಪುಸ್ತಕ ಪ್ರಾಧಿಕಾರವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಡಿಸೆಂಬರ್ 24ರಿಂದ 28ರವರೆಗೆ 'ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳ'ವನ್ನು ಹಮ್ಮಿಕೊಂಡಿದೆ. ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದು.

ಮಳಿಗೆಯೊಂದಕ್ಕೆ 1,000 ರುಪಾಯಿ ಬಾಡಿಗೆ, 1,000 ರುಪಾಯಿ ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಇವರ ಹೆಸರಿನಲ್ಲಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಫಿಸುವ ಪ್ರಕಾಶಕರು/ಪ್ರದರ್ಶಕರು ನಿಗದಿತ ಅರ್ಜಿ ನಮೂನೆಯಲ್ಲಿ ಸಲ್ಲಿಸಬೇಕು.[8 ಭಾಷೆಯಲ್ಲಿ ನೀಟ್ ಪರೀಕ್ಷೆ, ಕನ್ನಡ ವಿದ್ಯಾರ್ಥಿಗಳಿಗೆ ಯಾಕೀ ಶಿಕ್ಷೆ?]

ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಪ್ರಾಧಿಕಾರದ ವೆಬ್ ಸೈಟ್ www.kannadapusthakapradhikara.com ನಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಡಿಸೆಂಬರ್ 23ರಂದು ಸಂಜೆ 4 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.

Kannada

ಆದ್ಯತೆ ಮೇಲೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು - 560 002 ದೂ: 080-22484516/2107704 ಅನ್ನು ಸಂಪರ್ಕಿಸಬಹುದು.[ಕನ್ನಡಕ್ಕಾಗಿ ಭಿಕ್ಷೆ ಬೇಡಬೇಕಿಲ್ಲ, ಬೊಬ್ಬೆ ಹೊಡೆಯಬೇಕಿಲ್ಲ]

ರಾಜ್ಯ ಮಟ್ಟದ ಕಿರುನಾಟಕ ಸ್ಪರ್ಧೆ ಬಹುಮಾನ ವಿತರಣೆ: ಕರ್ನಾಟಕ ಸರಕಾರ ಸಚಿವಾಲಯ ಕ್ಲಬ್ ವತಿಯಿಂದ ಡಿಸೆಂಬರ್ 24 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಕಬ್ಬನ್ ಉದ್ಯಾನದಲ್ಲಿರುವ ಕೆ.ಜಿ.ಎಸ್. ಕ್ಲಬ್ ನ ಬಿ.ಚನ್ನಬಸವಪ್ಪ ಸಭಾಂಗಣದಲ್ಲಿ ರಂಗ ಕಾರ್ತೀಕ- 2016ರ ರಾಜ್ಯ ಮಟ್ಟದ ಕಿರು ನಾಟಕ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಹಮ್ಮಿಕೊಂಡಿದೆ.

English summary
Kannada books discount sales from December 24th by Kannada pusthaka pradhikara in Bengaluru.
Please Wait while comments are loading...