ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಫಿ ನಾರಾಯಣಮೂರ್ತಿ ಸಿಎಂ ಭೇಟಿಯಾಗಿದ್ದು ಯಾಕೆ?

By Madhusoodhan
|
Google Oneindia Kannada News

ಬೆಂಗಳೂರು, ಜೂನ್ , 01: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಮತ್ತು ಸಿಎಂ ಸಿದ್ದರಾಮಯ್ಯ ಬುಧವಾರ ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆ ನಡೆಯಿತು.

ಸಿಎಂ ಭೇಟಿ ನಂತರ ಮಾಧ್ಯಗಳೊಂದಿಗೆ ಮಾತನಾಡಿದ ನಾರಾಯಣ ಮೂರ್ತಿ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂಬ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಲು ನೀಡಲು ನಿರಾಕರಿಸಿದರು. [ಮೋದಿ ವಿರುದ್ಧದ ಭಾಷಣ ನಂದಲ್ಲ ಎಂದ ನಾರಾಯಣಮೂರ್ತಿ]

karnataka

'ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ವಿಚಾರ ಹಿರಿಯರಿಗೆ ಬಿಟ್ಟಿದ್ದು, ಯಾರೂ ತೀರ್ಮಾನ ತೆಗೆದುಕೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಮೂರ್ತಿ ಲಂಡನ್ ನಲ್ಲಿದ್ದಿದ್ದರಿಂದ ಇತ್ತೀಚೆಗೆ ರಚನೆಯಾದ ವಿಷನ್ ಗ್ರೂಪ್ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶಿಕ್ಷಣ ಸಂಸ್ಥೆಯೊಂದಕ್ಕೆ ಸಂಬಂಧಿಸಿ ಚರ್ಚೆ ನಡೆಸಿದರು ಎಂಬ ಮಾಹಿತಿ ಗೊತ್ತಾಗಿದೆ.

ಮಾಧ್ಯಮಗಳ ಮುಂದೆ ನಾರಾಯಣಮೂರ್ತಿ ಸ್ಪಷ್ಟವಾಗಿ ಕನ್ನಡದಲ್ಲೇ ಮಾತನಾಡಿದ್ದು ವಿಶೇಷ. ಈ ಹಿಂದೆ ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿ ಮೂರ್ತಿ ವಿವಾದಕ್ಕೆ ಸಿಕ್ಕಿದ್ದರು.[ಭಯದಲ್ಲಿ ಬದುಕುತಿಹ ಅಲ್ಪಸಂಖ್ಯಾತರು : ಎನ್ಆರ್‌ಎನ್ ಉವಾಚ]

English summary
Infosys founder N R Narayana Murthy on Wednesday met Chief Minister Siddaramaiah in Bengaluru. After The meeting Narayana Murthy said he had met the CM to discuss some issues related to an educational institute.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X