ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಮಹಿಳೆ ಬಂಧನ

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಚೆನ್ನೈ ಮೂಲದ ಮಹಿಳೆಯನ್ನು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

By Ramesh
|
Google Oneindia Kannada News

ಬೆಂಗಳೂರು, ಫೆಬ್ರವರಿ. 19 : ಗುದದ್ವಾರದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಚೆನ್ನೈ ಮೂಲದ ಮಹಿಳೆಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಮಹಿಳೆಯಿಂದ 12.84 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. 'ಥಾಯ್‌ ಏರ್‌ಲೈನ್ಸ್ ನ ಟಿ.ಜಿ. 325 ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬಂದಿದ್ದ ಮಹಿಳೆಯ ಬಳಿ ಚಿನ್ನವಿರುವ ಬಗ್ಗೆ ಲೋಹ ಶೋಧಕವು ಸುಳಿವು ನೀಡಿತ್ತು.

ಅವರ ಬ್ಯಾಗ್‌ ಪರಿಶೀಲಿಸಿದರೂ ಚಿನ್ನ ಪತ್ತೆಯಾಗಿರಲಿಲ್ಲ. ಬಳಿಕ ಮಹಿಳಾ ಸಿಬ್ಬಂದಿ, ಅವರನ್ನು ಕೊಠಡಿಗೆ ಕರೆದೊಯ್ದು ಹೆಚ್ಚಿನ ತಪಾಸಣೆ ನಡೆಸಿದರು. ಈ ವೇಳೆ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡಿದ್ದು ಬೆಳಕಿಗೆ ಬಂದಿದೆ'ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Kempegowda International Airport Customs officer detained Woman for smuggling gold

'ಗುದದ್ವಾರದಲ್ಲಿ ಸಾಗಿಸಲೆಂದೇ ಸಣ್ಣ ಗಾತ್ರದ ಮೊಳೆಗಳ ಮಾದರಿಯಲ್ಲಿ ಚಿನ್ನವನ್ನು ಸಿದ್ಧಪಡಿಸಲಾಗಿತ್ತು. ಅವುಗಳನ್ನು ಗುದದ್ವಾರದಲ್ಲಿ ಇಟ್ಟುಕೊಂಡಿದ್ದ ಮಹಿಳೆಯು ಬ್ಯಾಂಕಾಕ್‌ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಬಂದಿದ್ದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ' ಎಂದು ಹೇಳಿದ್ದಾರೆ.

English summary
Bengaluru Kempegowda International Airport Customs officer detained a Chennai woman for smuggling gold on February 18. Gold worth over Rs 12.84 lakh seized.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X