ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿಗೆ ದೂರು ಕೊಡಲು ಬಂತು ಮೊಬೈಲ್ ಅಪ್ಲಿಕೇಶನ್

|
Google Oneindia Kannada News

ಬೆಂಗಳೂರು, ಜನವರಿ 23 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜನರ ದೂರುಗಳನ್ನು ಸ್ವೀಕರಿಸಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಬಿಬಿಎಂಪಿಯ 20 ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಮೊಬೈಲ್ ಮೂಲಕವೇ ನೀಡಬಹುದಾಗಿದೆ.

ಶುಕ್ರವಾರ ಬಿಬಿಎಂಪಿ ಕಚೇರಿಯಲ್ಲಿ ಮೇಯರ್ ಮಂಜುನಾಥ ರೆಡ್ಡಿ ಮತ್ತು ಪಾಲಿಕೆ ಆಯುಕ್ತ ಕುಮಾರ ನಾಯಕ್ ಅವರು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದರು. 'ಬಿಬಿಎಂಪಿ ಸಹಾಯ' ಅಪ್ಲಿಕೇಶನ್ ಮೂಲಕ ನೀವು ದೂರು ನೀಡಬಹುದು. ದೂರಿಗೆ ಸಂಬಂಧಪಟ್ಟಂತೆ ತೆಗೆದುಕೊಂಡ ಕ್ರಮಗಳ ವಿವರ ನಿಮ್ಮ ಮೊಬೈಲ್‌ಗೆ ಸಂದೇಶ ರೂಪದಲ್ಲಿ ಬರುತ್ತದೆ. [ಇನ್ನೂ 40 ಬೆಂಗಳೂರು ಒನ್ ಕೇಂದ್ರ ಸ್ಥಾಪನೆ]

ಸುಲಭವಾಗಿ ಬಳಸಲು ಸಾಧ್ಯವಾಗುವಂತೆ ಅಪ್ಲಿಕೇಶನ್‌ ರೂಪಿಸಲಾಗಿದೆ. ಅಪ್ಲಿಕೇಶನ್ ಮೂಲಕ ಬರುವ ದೂರುಗಳನ್ನು ನಿರ್ವಹಣೆ ಮಾಡಲು 24 ಗಂಟೆಗಳ ಕಾಲವೂ ಕಾರ್ಯನಿರ್ವಹಣೆ ಮಾಡುವ ಸಹಾಯವಾಣಿಯನ್ನು ಆರಂಭಿಸಲಾಗಿದೆ. [ಸಾವಿನ ದವಡೆಯಿಂದ ಪಾರಾದ ಮರದಲ್ಲಿ ಮರುಜೀವ!]

'ಬಿಬಿಎಂಪಿ ಸಹಾಯ' ಅಪ್ಲಿಕೇಶನ್ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಸ್ವಂತ ಮೊಬೈಲ್ ​ಫೋನ್ ಅಪ್ಲಿಕೇಶನ್ ಹೊಂದಿರುವ ಪಾಲಿಕೆ ಎಂಬ ಹೆಗ್ಗಳಿಕೆಗೆ ಬಿಬಿಎಂಪಿ ಪಾತ್ರವಾಗಿದೆ. ಗೂಗಲ್ ಪ್ಲೇ ಸ್ಟೋರ್ ಮತ್ತು ಬಿಬಿಎಂಪಿ ವೆಬ್‌ಸೈಟ್‌ಗೆ ಭೇಟಿ ನೀಡಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ......

ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದ ಬಿಬಿಎಂಪಿ

ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದ ಬಿಬಿಎಂಪಿ

ಸಾರ್ವಜನಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೊಬೈಲ್ ಅಪ್ಲಿಕೇಶನ್‌ಅನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಸ್ವಂತ ಮೊಬೈಲ್ ​ಫೋನ್ ಅಪ್ಲಿಕೇಶನ್ ಹೊಂದಿರುವ ಪಾಲಿಕೆ ಎಂಬ ಹೆಗ್ಗಳಿಕೆಗೆ ಬಿಬಿಎಂಪಿ ಪಾತ್ರವಾಗಿದೆ.

20 ಇಲಾಖೆಗಳ ಬಗ್ಗೆ ದೂರು ನೀಡಬಹುದು

20 ಇಲಾಖೆಗಳ ಬಗ್ಗೆ ದೂರು ನೀಡಬಹುದು

ಬಿಬಿಎಂಪಿ ಸಹಾಯ ಮೊಬೈಲ್ ಅಪ್ಲಿಕೇಶನ್ ಮೂಲಕ ಮೂಲಸೌಕರ್ಯ, ರಸ್ತೆ, ತ್ಯಾಜ್ಯ ನಿರ್ವಹಣೆ, ಕಟ್ಟಡ ಯೋಜನೆ, ಆಸ್ತಿ ತೆರಿಗೆ, ಆರೋಗ್ಯ, ಪರಿಸರ, ಮರಗಳ ಕಟಾವು ಮತ್ತು ಅರಣ್ಯ ಇಲಾಖೆ ಸೇರಿದಂತೆ 20 ಇಲಾಖೆಗಳ ಬಗ್ಗೆ ದೂರುಗಳನ್ನು ಸಲ್ಲಿಸಬಹುದಾಗಿದೆ.

ಎಸ್‌ಎಂಎಸ್ ಮೂಲಕ ತಿಳಿಯಬಹುದಾಗಿದೆ

ಎಸ್‌ಎಂಎಸ್ ಮೂಲಕ ತಿಳಿಯಬಹುದಾಗಿದೆ

ಜನರು ನೀಡಿರುವ ದೂರಿನ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ದೊರೆಯಲಿದೆ. ದೂರು ಬಗೆಹರಿಸಿದ ಬಗ್ಗೆ ಅಸಮಾಧಾನವಿದ್ದಲ್ಲಿ ಮರು ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜನರು ನೀಡಿರುವ ದೂರುಗಳನ್ನು ಅಧಿಕಾರಿಗಳಿಗೆ ಮತ್ತು ಕ್ಷೇತ್ರದ ಪಾಲಿಕೆ ಸದಸ್ಯರಿಗೆ ಎಸ್​ಎಂಎಸ್ ಮೂಲಕ ತಿಳಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.

ಗೊಂದಲ ನಿವಾರಿಸಲಿದೆ ಅಪ್ಲಿಕೇಶನ್

ಗೊಂದಲ ನಿವಾರಿಸಲಿದೆ ಅಪ್ಲಿಕೇಶನ್

ಜನರಿಗೆ ಯಾವ ಇಲಾಖೆಗೆ ದೂರು ನೀಡಬೇಕು ಎಂಬ ಬಗ್ಗೆ ಗೊಂದಲ ಉಂಟಾಗುತ್ತಿತ್ತು. ಇದನ್ನು ಬಗೆಹರಿಸಲು ಸುಲಭವಾದ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಇಲಾಖೆಯ ಚಿತ್ರಗಳ ಜೊತೆ ಮಾಹಿತಿ ನೀಡಲಾಗಿದೆ. ಅಲ್ಲಿಗೆ ಹೋಗಿ ಜನರು ತಮ್ಮ ದೂರು ಸಲ್ಲಿಸಬಹುದು. ಅಗತ್ಯವಿದ್ದರೆ ಫೋಟೋಗಳನ್ನು ಸಹ ಅಪ್‌ಲೋಡ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಪ್ಲಿಕೇಶನ್ ಲಭ್ಯ

ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಪ್ಲಿಕೇಶನ್ ಲಭ್ಯ

ಬಿಬಿಎಂಪಿ ಸಹಾಯ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು http://bbmp.gov.in ಅಥವ ಗೂಗಲ್ ಪ್ಲೇ ಸ್ಟೋರ್‌ಗೆ ಭೇಟಿ ನೀಡಿ.

English summary
Bruhat Bengaluru Mahanagara Palike (BBMP) has launched a mobile application to address public grievances. From BBMP Sahaya application you complain on issues relating to 20 departments. BBMP mayor B.N.Manjunatha Reddy launched the app on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X