ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಬ್ಬಕ್ಕೆ ಹೆಚ್ಚುವರಿ ಬಸ್, ಪಿಕಪ್ ಪಾಯಿಂಟ್ ನೋಡಿಕೊಳ್ಳಿ

|
Google Oneindia Kannada News

ಬೆಂಗಳೂರು, ಆಗಸ್ಟ್ 30 : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸುಮಾರು 1,200 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 2 ಮತ್ತು 4ರಂದು ಬಸ್ಸುಗಳು ಬೆಂಗಳೂರಿನಿಂದ ಹೊರಡಲಿವೆ.

ಕೆಎಸ್ಆರ್‌ಟಿಸಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ನಗರದಿಂದ ಸೆಪ್ಟೆಂಬರ್ 2ರ ಶುಕ್ರವಾರ, ಸೆಪ್ಟೆಂಬರ್ 4ರ ಭಾನುವಾರ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ. ಸೆಪ್ಟೆಂಬರ್ 5ರ ಸೋಮವಾರದಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಬಸ್ಸುಗಳು ವಾಪಸ್ ಆಗಲಿವೆ.[2016ರ ರಜೆ ಪಟ್ಟಿ ನೋಡಿ]

KSRTC to operate 1200 additional buses for Ganesha festival

ಹೆಚ್ಚುವರಿ ಬಸ್ಸುಗಳಲ್ಲಿ ಮುಂಗಡ ಟಿಕೆಟ್ ಬುಕ್ ಮಾಡಲು ಕೆಎಸ್ಆರ್‌ಟಿಸಿ ಅವಕಾಶ ಕಲ್ಪಿಸಿದೆ. ನಗರದ ವಿವಿಧ ಪ್ರದೇಶಗಳಲ್ಲಿ ಪಿಕಪ್ ಪಾಯಿಂಟ್ ಇರುವುದರಿಂದ ಪ್ರಯಾಣಿಕರು ಟಿಕೆಟ್ ಬುಕ್ ಮಾಡುವಾಗ ಪಿಕಪ್ ಪಾಯಿಂಟ್‌ಗಳ ಆಯ್ಕೆ ಬಗ್ಗೆ ಗಮನವಿಡಬೇಕು ಎಂದು ಕೆಎಸ್ಆರ್‌ಟಿಸಿ ಹೇಳಿದೆ. [KSRTC ವೆಬ್ ಸೈಟ್]

ಬಸ್ಸುಗಳ ಪಿಕಪ್ ಪಾಯಿಂಟ್‌ಗಳು

* ಕೆಂಪೇಗೌಡ ಬಸ್ ನಿಲ್ದಾಣ : ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ.

* ಶಾಂತಿನಗರ ಬಸ್ ನಿಲ್ದಾಣ : ತಮಿಳುನಾಡು, ಆಂಧ್ರಪ್ರದೇಶ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಬಸ್ಸುಗಳು.

* ಮೈಸೂರು ರಸ್ತೆ : ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ

* ಮೈಸೂರು ರಸ್ತೆ ಬಸ್ ನಿಲ್ದಾಣ : ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ ಮುಂತಾದ ಕಡೆ ಸಾಗುವ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಲಾದ ವಿಶೇಷ ಬಸ್ಸುಗಳು.

* ಬಸವೇಶ್ವರ ಬಸ್ ನಿಲ್ದಾಣ ಪೀಣ್ಯ : ಕಲಬುರಗಿ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಮುಂತಾದ ಕಡೆ ಸಾಗುವ ಮುಂಗಡವಾಗಿ ಟಿಕೆಟ್ ಕಾಯ್ದಿರಿಸುವ ಬಸ್ಸುಗಳು.

* ಮುಂಗಡ ವಾಗಿ ಟಿಕೆಟ್ ಕಾಯ್ದಿರಿಸದ ಹೆಚ್ಚುವರಿ ಬಸ್ಸುಗಳು ಮೆಜೆಸ್ಟಿಕ್ ನಿಲ್ದಾಣದಿಂದಲೇ ಹೊರಡಲಿವೆ.

* ವಿಜಯನಗರ, ಜೆ.ಪಿ.ನಗರ, ಜಯನಗರ 4 ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ಸಂಚಾರ ನಡೆಸಲಿವೆ.

ರಜಾ ದಿನಗಳ ಪಟ್ಟಿ

* ಸೆಪ್ಟೆಂಬರ್ 4 ಭಾನುವಾರ
* ಸೆಪ್ಟೆಂಬರ್ 5 ಸೋಮವಾರ

English summary
KSRTC has made arrangements to operate 1,200 additional buses to meet the rush between September 2 and 4, 2016 for Gowri-Ganesha festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X