ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಲಾಶಯಗಳಲ್ಲಿ ನೀರಿನ ಕೊರತೆ,ಬೆಂಗಳೂರಲ್ಲಿ 2 ಗಂಟೆ ಪವರ್ ಕಟ್

By Vanitha
|
Google Oneindia Kannada News

ಬೆಂಗಳೂರು, ಸೆ, 01 : ಮಳೆರಾಯ ಈ ವರ್ಷ ಕೊಂಚ ಬೇಸರಿಸಿಕೊಂಡಂತಿದೆ. ಇದರ ಪರಿಣಾಮ ಜಲಾಶಯಗಳಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲೋಡ್‌ಶೆಡ್ಡಿಂಗ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ 56% ಕುಸಿದೆ. ಇದರಿಂದ ಜಲವಿದ್ಯುತ್ ಉತ್ಪಾದನೆ ಬಹುತೇಕ ಸ್ಥಗಿತಗೊಂಡಿದೆ. ಹೀಗಾಗಿ ಬೆಂಗಳೂರಿನಲ್ಲಿ ದಿನಕ್ಕೆ 2 ಗಂಟೆ ಕರೆಂಟ್ ತೆಗೆಯಲು ತೀರ್ಮಾನ ಕೈಗೊಳ್ಳಲಾಗಿದೆ.[ಮನೆಯಲ್ಲಿಯೇ ಬೆಸ್ಕಾಂ ಬಿಲ್ ಕಟ್ಟಿ, ರಶೀದಿ ಪಡೆಯಿರಿ]

Load Shedding : daily two hour current cut in bengaluru

ಲೋಡ್ ಶೆಡ್ಡಿಂಗ್ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ, ರಾಜ್ಯದಲ್ಲಿರುವ 13 ಜಲಾಶಯಗಳಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಪ್ರತಿ ವರ್ಷಕ್ಕಿಂತ ಈ ವರ್ಷ ತೀರಾ ಕಡಿಮೆಯಾಗಿದೆ.

ಶಾಖೋತ್ಪನ್ನ, ಉಷ್ಣ ವಿದ್ಯುತ್ ಸ್ಥಾವರಗಳಲ್ಲೂ ನಿರೀಕ್ಷಿತ ಪ್ರಮಾಣದ ವಿದ್ಯುತ್ ಉತ್ಪಾದನೆ ಸಾಧ್ಯವಾಗದ ಕಾರಣ ಲೋಡ್ ಶೆಡ್ಡಿಂಗ್ ಅನಿವಾರ್ಯ ಆದ ಕಾರಣ ಸಚಿವ ಸಂಪುಟ ಸಭೆ ಕೈಗೊಂಡಿದ್ದು, ಈ ತೀರ್ಮಾನಕ್ಕೆ ಬಂದಿದೆ.[ಕರ್ನಾಟಕದಲ್ಲಿ ಮತ್ತೊಂದು ಪರಮಾಣು ಸ್ಥಾವರ ನಿರ್ಮಾಣ?]

ಒಟ್ಟಿನಲ್ಲಿ ರಾಜ್ಯದಲ್ಲಿ 10,189 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿದೆ. ಆದರೆ ಪ್ರಸ್ತುತ 6,600 ರಿಂದ 7,300 ಮೆಗಾವ್ಯಾಟ್ ವಿದ್ಯುತ್ ಮಾತ್ರ ಲಭ್ಯವಾಗುತ್ತಿದೆ. ಇನ್ನೂ 3000 ಮೆಗವ್ಯಾಟ್ ವಿದ್ಯುತ್ ಉತ್ಪಾದನೆ ಕಷ್ಟ ಸಾಧ್ಯವಾಗುತ್ತಿದೆ ಎಂದು ಹೇಳಿದರು.

English summary
This year rain is not come comfortably. Dam water level is decreased. So government has taken decision load shedding.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X