ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆದಾಯ ಮೀರಿ ಗಳಿಕೆ: ಸಿಟಿ ರವಿ ವಿರುದ್ಧ ಎಸಿಬಿ ತನಿಖೆ

By Mahesh
|
Google Oneindia Kannada News

ಬೆಂಗಳೂರು, ಅಕ್ಟೋಬರ್ 08: ಮಾಜಿ ಸಚಿವ ಸಿಟಿ ರವಿ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಗಳಿಕೆ ಹೊಂದಿರುವ ಆರೋಪ ಹೊರೆಸಲಾಗಿದೆ. ಈ ಕುರಿತಂತೆ ತನಿಖೆ ನಡೆಸಿ ನಾಲ್ಕು ತಿಂಗಳೊಳಗೆ ವರದಿ ಸಲ್ಲಿಸುವಂತೆ ಎಸಿಬಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚಿಕ್ಕಮಗಳೂರು ಮೂಲದ ಸಿಟಿ ರವಿ ಅವರ ವಿರುದ್ಧ ಆರ್ ಟಿಐ ಕಾರ್ಯಕರ್ತ ಸಿ. ಕುಮಾರ್ ಎಂಬುವವರು 2012ರಲ್ಲಿ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Lokayukta court orders probe against C.T. Ravi

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ, ತನಿಖೆಗೆ ಆದೇಶಿಸಿದೆ. ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪ್ರಕರಣದ ತನಿಖೆ ನಡೆಸಲಿದ್ದು, ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸಬೇಕಿದೆ. ಎಸಿಬಿಯ ಡಿವೈಎಸ್ಪಿ ದರ್ಜೆ ಅಧಿಕಾರಿಗಳು 2017ರ ಜನವರಿ 7ರೊಳಗೆ ವರದಿ ನೀಡಬೇಕಿದೆ.

English summary
The Special Lokayukta Court ordered a probe into the assets of BJP leader and former Minister, C.T. Ravi. The court, hearing a 2010 private complaint lodged by activist A.C. Kumar, ordered the Anti-Corruption Bureau (ACB) to take up a probe and submit report within four months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X